ಬಾಲಕಿ ಅತ್ಯಾಚಾರ ಪ್ರಕರಣ:

ಬಾಲಕಿ ಅತ್ಯಾಚಾರ ಪ್ರಕರಣ:

Share

ಬೆಳ್ತಂಗಡಿ : ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಕೊಕ್ರಾಡಿಯಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ನಿವಾಸಿ ಯೋಗೀಶ (26) ಎಂಬಾತನೇ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಇದೀಗ ಶಿಕ್ಷೆ ಎದುರಿಸುತ್ತಿರುವ ಆರೋಪಿ.

2020ರಲ್ಲಿ ಆರೋಪಿಯು ಕೊಕ್ರಾಡಿಯ ಬಾಲಕಿಯನ್ನು ಉಪಾಯದಿಂದ ಪುಸಲಾಯಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದು ಬಳಿಕ ಬಾಲಕಿ ಗರ್ಭಿಣಿಯಾಗಿದ್ದಳು.ಈಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು
.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸ್ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಪ್ರಕರಣಕ್ಕೆ ಸಂಬಂಧಿಸಿ. 13 ಸಾಕ್ಷಿದಾರರನ್ನು ವಿಚಾರಿಸಿ 29 ಪ್ರಮುಖ ದಾಖಲೆಗಳನ್ನು ಹಾಗೂ ಪೂರಕ ಡಿಎನ್ಎ ವರದಿಗಳು, ಸಾಕ್ಷ್ಯಗಳನ್ನು ಪರಿಗಣಿಸಲಾಗಿತ್ತು.
ವಾದ ವಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಆರೋಪಿ
ಯೋಗೀಶ್ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದೆ.

Post Comment

ಟ್ರೆಂಡಿಂಗ್‌