ಬಂದಾರು ಕುಂಟಾಲಪಲ್ಕೆ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ :      ಜಾಥಾ, ಸಾಂಸ್ಕೃತಿಕ ವೈವಿಧ್ಯ

ಬಂದಾರು ಕುಂಟಾಲಪಲ್ಕೆ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ :      ಜಾಥಾ, ಸಾಂಸ್ಕೃತಿಕ ವೈವಿಧ್ಯ

Share
August-1024x768 ಬಂದಾರು ಕುಂಟಾಲಪಲ್ಕೆ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ :             ಜಾಥಾ, ಸಾಂಸ್ಕೃತಿಕ ವೈವಿಧ್ಯ

ಬೆಳ್ತಂಗಡಿ : ಬಂದಾರು ಗ್ರಾಮದ ಕುಂಟಾಲಪಲ್ಕೆ   ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಲಕೃಷ್ಣ ಗೌಡ ನೆಲ್ಲಿಗೇರು ಅವರು ಧ್ವಜಾರೋಹಣ ಹಾಗೂ ಧ್ವಜವಂದನೆಗೈದರು.

ವಿದ್ಯಾರ್ಥಿಗಳು, ಊರ ವಿದ್ಯಾಭಿಮಾನಿಗಳು ಪೋಷಕರ ಭಾಗವಹಿಸುವಿಕೆಯೊಂದಿಗೆ ಸ್ವಾತಂತ್ರ್ಯೋತ್ಸವ ಜಾಥಾ ನೆರವೇರಿತು. ಸಭಾ ಕಾರ್ಯಕ್ರಮದ ಬಳಿಕ ‌ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆದವು. ಈ ಸಂದರ್ಭ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಕೊಡ್ಯೇಲು, ಮೋಹನ ಗೌಡ ಕೊಡ್ಯೇಲು, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ  ಮೋನಪ್ಪ ಗೌಡ‌ ನೆಲ್ಲಿಗೇರು,ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಕೆ.,  ಮತ್ತಿತರರು ಉಪಸ್ಥಿತರಿದ್ದರು.  ಊರ ಹತ್ತು ಸಮಸ್ತರು, ಹಿರಿಯ ವಿದ್ಯಾರ್ಥಿಗಳು, ಸ್ಥಳೀಯ ಸರಸ್ವತಿ ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಸಹ ಶಿಕ್ಷಕಿಯರು, ವಿದ್ಯಾರ್ಥಿಗಳು ಪಾಲ್ಗೊಂಡರು. ಸಮಾರಂಭದ ಕೊನೆಯಲ್ಲಿ ಸಾಮೂಹಿಕ ಸಿಹಿ ಭೋಜನ ಏರ್ಪಡಿಸಲಾಗಿತ್ತು.

Post Comment

ಟ್ರೆಂಡಿಂಗ್‌

error: Content is protected !!