ಬಡ ರೋಗಿಗಳಿಗೆ ಹಣ್ಣಹಂಪಲು ವಿತರಿಸಿ ಗಾಂಧೀಜಯಂತಿ ಆಚರಣೆ
ಬೆಳ್ತಂಗಡಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ (ಲಿ) ಬಂಟ್ವಾಳ ಬ್ರಾಂಚ್, ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು. ಗಾಂಧೀಜಯಂತಿ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದಲ್ಲದೆ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮ ಗಾಂಧಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ನ್ಯಾಷನಲ್ ಇನ್ಶುರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜಾನ್ ಅರ್ವಿನ್ ಡಿಸೋಜ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ , ಸುಳ್ಯ ಶಾಖೆಯ ನಿವೃತ್ತ ಮೆನೇಜರ್ ಪ್ರಮೋದ್ ಆರ್ ನಾಯಕ್ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ದನ್ , ಹಿರಿಯ ನ್ಯಾಯವಾದಿ , ನಿರ್ದೇಶಕರಾದ ಶಿವಕುಮಾರ್ ಎಸ್ , ಎಂ , ನಿರ್ದೇಶಕರಾದ ನ್ಯಾಯವಾದಿ ಸುಕನ್ಯಾ ಹೆಚ್ , ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.
Post Comment