ಮೈಸೂರು ದಸರಾ ಕ್ರೀಡಾಕೂಟ : ಬೆಳ್ಳಿ ಪದಕ ಗೆದ್ದ ತೇಜಲ್ ಕೆ.ಆರ್
ಬೆಳ್ತಂಗಡಿ : ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2024 ಇದರಲ್ಲಿ ಪುರುಷರ ವಿಭಾಗದ 110 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ನಿವಾಸಿಯಾದ ತೇಜಲ್ ಕೆ.ಆರ್ ಇವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.
ಇವರು ಇದುವರೆಗೆ ಅನೇಕ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಹಾಗೂ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಹಾಗೂ ಕಳೆದ ಜೂನ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಯೂತ್ ಮೀಟ್ ನಲ್ಲಿ ಕೂಡ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು.
ಇವರು ಮುಂಡಾಜೆ ನಿವಾಸಿಯಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ರಾಜೇಶ್ ಇವರ ಪುತ್ರನಾಗಿರುತ್ತಾರೆ.
ಆಳ್ವಾಸ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
Post Comment