ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ: ತಣ್ಣೀರುಪಂತದಲ್ಲಿ ಸಂಶಯ ಮೂಡಿಸಿದ ಪ್ರಕರಣ
ಬೆಳ್ತಂಗಡಿ : ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ರಾಜೀವ ಪೂಜಾರಿ (72 ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನ ಹೊಸ್ತಿಲಲ್ಲಿ ಕತ್ತಿಯಿಂದ ಕತ್ತು ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿದ್ದಾರೆ.
ಈತ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಇದೊಂದು ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಂಗಳೂರಿಗೆ ಕಳುಹಿಸಲಾಗಿದೆ.
Post Comment