ಶಕ್ತಿನಗರ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
Share
ಗುರುವಾಯನಕೆರೆ : ಇಲ್ಲಿನ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31) ಎಂಬವರೇ ಮೃತಪಟ್ಟ ಬೈಕ್ ಸವಾರ. ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Post Comment