2010ರಲ್ಲಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಅತಿಥಿ ಶಿಕ್ಷಕಿ ಕು.ಭಾರತಿ ನಿಧನ


ಬೆಳ್ತಂಗಡಿ : 14 ವರ್ಷಗಳ ಹಿಂದೆ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಇದುವರೆಗೂ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕಳಿಯ ಗ್ರಾಮದ ಕು.ಭಾರತಿ ಅವರು ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಉಬರಡ್ಕ ನಿವಾಸಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಅವರ ಪುತ್ರಿಯಾಗಿರುವ ಇವರು ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯಾಗಿದ್ದರು.
2010ರ ಜುಲೈ 30ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೂಡಿಗೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ಅಟೋ ರಿಕ್ಷಾಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮೆಲಂತಬೆಟ್ಟು ಪ್ರಥಮದರ್ಜೆ ಕಾಲೇಜಿನ ಅತಿಥಿ ಶಿಕ್ಷಕಿಯರಾದ ಕು.ಜಯಮಾಲಾ ಮತ್ತು ಕು.ಭಾರತಿ ಗಂಭೀರ ಗಾಯಗೊಂಡು ಜಯಮಾಲ ಸ್ಥಳದಲ್ಲೇ ಮೃತಪಟ್ಟಿದ್ದರು.
ಈಕೆ ಕೆ.ಎ.ಎಸ್. ಪರೀಕ್ಷೆ ಬರೆದಿದ್ದು ಮರಣೋತ್ತರವಾಗಿ ಬಂದ ಫಲಿತಾಂಶದಲ್ಲಿ ಜಯಮಾಲಾ ಕೆ.ಎ.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.
ಆದರೆ ಕು.ಭಾರತಿ ಅವರು 14 ವರ್ಷಗಳಿಂದ ಹಂತ ಹಂತವಾಗಿ ಆಸ್ಪತ್ರೆಯಲ್ಲಿ ಮತ್ತು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ನಿಧನರಾದರು. ಮೃತರು ತಾಯಿ ಹಾಗೂ ಸಹೋದರ, ಸಹೋದರಿಯರನ್ನು ಬಂಧುಗಳನ್ನು ಅಗಲಿದ್ದಾರೆ.
Post Comment