ರಜತ ಸಂಭ್ರಮದಲ್ಲಿರುವ ಉಜಿರೆ ಬೆನಕ ಆಸ್ಪತ್ರೆಗೆ ಸಭಾಪತಿ ಯು.ಟಿ.ಖಾದರ್ ಭೇಟಿ : ನವೀಕೃತ ಆಸ್ಪತ್ರೆಯ ಅತ್ಯಾಧುನಿಕೀಕರಣಕ್ಕೆ ಮೆಚ್ಚುಗೆ
ಬೆಳ್ತಂಗಡಿ : ಇಬ್ಬರು ವೈದ್ಯರಿಂದ ಆರಂಭವಾದ ಆಸ್ಪತ್ರೆ ಇಂದು ಆರೋಗ್ಯ ಕ್ಷೇತ್ರಗಳಲ್ಲಿ ವಿವಿಧ ಪರಿಣತಿ ಪಡೆದ 40ಕ್ಕಿಂತಲೂ ಅಧಿಕ ತಜ್ಞ ವೈದ್ಯರ ಸೇವೆಯನ್ನು ಉಜಿರೆಯಂತಹ ಪರಿಸರದಲ್ಲಿ ಬೆನಕ ಆಸ್ಪತ್ರೆ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವುದು ಸಾಮಾಜಿಕ ಕಾಳಜಿಯನ್ನು ತೋರಿಸುತ್ತದೆ, ಬೆನಕ ಆಸ್ಪತ್ರೆ ಈ ಪ್ರದೇಶದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರು ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಸಭಾಪತಿಯವರನ್ನು ಗೌರವಗಳಿಂದ ಸ್ವಾಗತಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರು ಬೆನಕ ಸಂಸ್ಥೆಗೂ ಸನ್ಮಾನ್ಯ ಯು.ಟಿ.ಖಾದರ್ ಅವರಿಗೂ ಅವಿನಾಭಾವ ಸಂಬಂಧವಿದೆ, ಕರ್ನಾಟಕ ಸರಕಾರದ ಆರೋಗ್ಯ ಸಚಿವರಾಗಿದ್ದಾಗ ಅವರು ಬೆನಕ ಆಸ್ಪತ್ರೆಗೆ ಬಂದು ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿಯನ್ನು ಉದ್ಘಾಟಿಸಿದ್ದು ಹಾಗೂ ಪಟ್ಟಣಗಳ ದೊಡ್ಡ ಆಸ್ಪತ್ರೆಗಳಿಗೆ ಸೀಮಿತವಾದ ಮೈಕ್ರೋಸರ್ಜರಿ, ಕೀಹೋಲ್ ಸರ್ಜರಿ, ಕಣ್ಣಿನ ಸರ್ಜರಿ ಮೊದಲಾದ ಸಂಕೀರ್ಣ ಶಸ್ತ್ರಚಿಕಿತ್ಸೆಗಳಿಗೆ ಬೆನಕ ಆಸ್ಪತ್ರೆ ಗುರುತಿಸಲ್ಪಟ್ಟು ದೂರದೂರಿನಿಂದ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಸಂತಸ ಹಂಚಿಕೊಂಡರು.
ಬೆನಕ ಆಸ್ಪತ್ರೆಯ ರಜತ ಸಂಭ್ರಮದ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಮಾನ್ಯ ಸಭಾಪತಿಗಳಾದ ಗೌರವಾನ್ವಿತ ಯು.ಟಿ.ಖಾದರ್ ಅವರು ಆಸ್ಪತ್ರೆಗೆ ಆಗಮಿಸಿರುವುದು ನಮಗೆಲ್ಲಾ ಸಂತೋಷ ಹಾಗೂ ಸಾರ್ಥಕ್ಯದ ಕ್ಷಣವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ತಿಳಿಸಿದರು.
ಆಸ್ಪತ್ರೆಯ ವತಿಯಿಂದ ಸಭಾಪತಿ ಯು.ಟಿ.ಖಾದರ್ ಅವರಿಗೆ ಡಾ. ಗೋಪಾಲಕೃಷ್ಣ, ಡಾ.ಆದಿತ್ಯ ರಾವ್ ಹಾಗೂ ಡಾ.ಅಂಕಿತಾ ಅವರು ಗೌರವಾರ್ಪಣೆ ಸಲ್ಲಿಸಿದರು.
ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರು ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್ ಕಾರ್ಯಕ್ರಮ ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದರು.
Post Comment