ಅಟೋ ರಿಕ್ಷಾಗೆ ಕಾರು ಡಿಕ್ಕಿ: ಸ್ಥಳದಲ್ಲೇ ಕಾರು ಬಿಟ್ಟು ಚಾಲಕ ಪರಾರಿ

ಬೆಳ್ತಂಗಡಿ : ಗುರುವಾಯನಕೆರೆಗೆ ಹೋಗುತ್ತಿದ್ದ ಅಪರಿಚಿತ ಆಲ್ಟೋ ಕಾರೊಂದು ಅತೀ ವೇಗವಾಗಿ ಅಜಾಗರೂಕತೆಯ ಚಾಲನೆಯಿಂದ ಉಪ್ಪಿನಂಗಡಿಗೆ ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಗೇರುಕಟ್ಟೆ ಪರಪ್ಪು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ KA 04 MM 7606 ಸಂಖ್ಯೆಯ ಅಪರಿಚಿತ ಆಲ್ಟೋ ಕಾರು ಬೆಳ್ತಂಗಡಿಯಿಂದ ಬರುತ್ತಿದ್ದ ರಮೇಶ್ ಎಂಬವರ ಅಟೋ ರಿಕ್ಷಾಕ್ಕೆ ಗೇರುಕಟ್ಟೆ ಪರಪ್ಪು ಮಸೀದಿ ಬಳಿ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕನೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಈ ಸಂದರ್ಭ ತನ್ನ ತಪ್ಪಿನ ಅರಿವಾಗಿ ಅಪರಿಚಿತ ಆಲ್ಟೋ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ ಅಥವಾ ಸ್ಥಳೀಯ ಪರಿಚಿತರ ಮನೆಯಲ್ಲಿ ಅಡಗಿ ಕುಳಿತಿರುವ ಸಾಧ್ಯತೆ ಇದೆ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Post Comment