ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಸಚಿವರುಗಳ ಭೇಟಿ

ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಸಚಿವರುಗಳ ಭೇಟಿ

Share
InShot_20250306_185002456-1011x1024 ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ             ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಸಚಿವರುಗಳ ಭೇಟಿ

ಬೆಳ್ತಂಗಡಿ : ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ಬಗ್ಗೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗ ಗುರುವಾರ ರಾಜಧಾನಿಯಲ್ಲಿ ಸಂಬಂಧಪಟ್ಟ ಸಚಿವರುಗಳನ್ನು ಭೇಟಿ ಮಾಡಿ ಚರ್ಚಿಸಿದರು. ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ಅವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ಸಂಘದ ನಿಯೋಗವನ್ನು ಸಂಬಂಧಪಟ್ಟ ಸಚಿವರುಗಳ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂಧರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Previous post

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Next post

ಬಂದಾರು-ಪಟ್ರಮೆ-ಕೊಕ್ಕಡ ಸಂಪರ್ಕಿಸುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ: ಸಂತಸ ಹಂಚಿಕೊಂಡ ಸ್ಥಳೀಯರು

Post Comment

ಟ್ರೆಂಡಿಂಗ್‌