ಬಂದಾರು-ಪಟ್ರಮೆ-ಕೊಕ್ಕಡ ಸಂಪರ್ಕಿಸುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ: ಸಂತಸ ಹಂಚಿಕೊಂಡ ಸ್ಥಳೀಯರು

ಬೆಳ್ತಂಗಡಿ : ಬಂದಾರು ಮತ್ತು ಪಟ್ರಮೆ-ಕೊಕ್ಕಡ ಗ್ರಾಮಸ್ಥರ ಹಲವು ವರ್ಷಗಳ ಕನಸಾಗಿದ್ದ ನೂತನ ಮೈಪಾಲ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಅವರು ಶನಿವಾರ ಸ್ಥಳೀಯ ಪ್ರಮುಖರ ಜೊತೆ ವೀಕ್ಷಣೆ ಮಾಡಿದರು.
ಬೆಳ್ತಂಗಡಿ ತಾಲೂಕಿನ ಕೊಕ್ಕಡ- ಬಂದಾರು ಮತ್ತು ಪಟ್ರಮೆ- ಗ್ರಾಮಗಳನ್ನು ಸಂಪರ್ಕಿಸುವ ಮೈಪಾಲ ಸೇತುವೆ ಮತ್ತು ಕಿಂಡಿ ಅಣೆಕಟ್ಟು ಕಾಮಗಾರಿಯು 72 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿದ್ದು ಶಾಸಕರ ಕಳೆದ ಅವಧಿಯಲ್ಲಿ ಶಿಲಾನ್ಯಾಸ ನಡೆದಿತ್ತು.
ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನು ಸಂಪರ್ಕಿಸುವ ಮೈಪಾಲ ಎಂಬಲ್ಲಿ ರೂ.72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವೀಕ್ಷಣೆ ಮಾಡಿದರು.
ಈ ಸಂದರ್ಭ ಹಲವು ವರ್ಷಗಳ ಕನಸು ನನಸಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಶಾಸಕರೊಂದಿಗೆ ಸಂತಸ ಹಂಚಿಕೊಂಡರು.

ಈ ಸಂದರ್ಭ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಆಳಂಬಿಲ, ವಿಶ್ವನಾಥ, ಬಿಜೆಪಿ ಮಂಡಲ ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಹಾಬಲ ಗೌಡ , ಬೆಳ್ತಂಗಡಿ ಎ.ಪಿ.ಎಂ.ಸಿ ಮಾಜಿ ನಿರ್ದೇಶಕ ಹೊನ್ನಪ್ಪ ಗೌಡ ಮತ್ತಿತರರು ಇದ್ದರು.
Post Comment