ಕೊಕ್ಕಡದಲ್ಲಿ ಮಾರ್ಚ್ 15ರಂದು ಸೌತಡ್ಕದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ಕೊಕ್ಕಡ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇವುಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸುವಂತೆ ಪತ್ರಿಕಾ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.
Post Comment