ಮೈರೋಳ್ತಡ್ಕ ಶಾಲಾ ‘ಅಮೃತ ಮಹೋತ್ಸವ’ ಪ್ರಯುಕ್ತ ಮಾರ್ಚ್ 16ಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ. ಆಸ್ಪತ್ರೆ ಸಹಯೋಗ

ಬೆಳ್ತಂಗಡಿ : ಎಸ್. ಡಿ. ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಅಮೃತ ಮಹೋತ್ಸವ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ,
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇವುಗಳ ಸಹಯೋಗದಲ್ಲಿ ಮಾರ್ಚ್ 16 ಭಾನುವಾರದಂದು ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಕೆ. ಸಾಹುಲ್ ಹಮೀದ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
Post Comment