ತೆಕ್ಕಾರು ‘ದ್ವೇಷ ಭಾಷಣ’ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ

ತೆಕ್ಕಾರು ‘ದ್ವೇಷ ಭಾಷಣ’ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ

Share
IMG-20250504-WA0001-3 ತೆಕ್ಕಾರು 'ದ್ವೇಷ ಭಾಷಣ' ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ

ಬೆಂಗಳೂರು : ತೆಕ್ಕಾರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಡಿದ ಭಾಷಣಕ್ಕೆ ಸಂಬಂಧಿಸಿ
ಸಮಾಜದಲ್ಲಿ ಕೋಮು ದ್ವೇಷ ಬಿತ್ತಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆಯ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಡಿದ ಭಾಷಣಕ್ಕೆ ಸಂಬಂಧಿಸಿ ಸ್ಥಳೀಯ ಎಸ್ ಬಿ ಇಬ್ರಾಹಿಂ ಎಂಬವರು ಸಲ್ಲಿಸಿರುವ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ
ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಹರೀಶ್ ಪೂಂಜ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀತಾನಂದ ಅವರ ಮುಂದೆ ಪ್ರಸ್ತಾಪಿಸಿದರು.
ಈ ಬಗ್ಗೆ ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು ಈ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ, ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಆದೇಶವಾದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ತೆಕ್ಕಾರುವಿನ ಭಟ್ರಬೈಲು ಎಂಬಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮೇ 3ರಂದು ಹರೀಶ್ ಪೂಂಜ ಅವರು ತುಳು ಭಾಷೆಯಲ್ಲಿ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು , ಕಾರ್ಯಕ್ರಮಕ್ಕೆ ಕರೆಯಬಾರದಿತ್ತು’ ಎಂದು ತಿಳಿಸಿದ್ದರು.
ಇಂಥ ಹೇಳಿಕೆ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಸಮುದಾಯಗಳ ನಡುವೆ ದ್ವೇಷ ಹರಿಡಿದ್ದಾರೆ. ಈ ಸಂಬಂಧದ ವೀಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲೂ ವೀಕ್ಷಿಸಿರುವುದಾಗಿ ಮೇ 4ರಂದು ಇಬ್ರಾಹಿಂ ಅವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ದೂರನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜ ವಿರುದ್ಧ ಬಿಎನ್ಸ್ ಸೆಕ್ಷನ್ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣವನ್ನು ಪ್ರಶ್ನಿಸಿ ಶಾಸಕ ಹರೀಶ ಪೂಂಜ ಹೈಕೋರ್ಟ್ ಮೆಟ್ಟಲೇರಿದ್ದರು.

IMG-20250413-WA0003-4-682x1024 ತೆಕ್ಕಾರು 'ದ್ವೇಷ ಭಾಷಣ' ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ
IMG-20250413-WA0002-4-792x1024 ತೆಕ್ಕಾರು 'ದ್ವೇಷ ಭಾಷಣ' ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ
IMG-20250413-WA0001-4-792x1024 ತೆಕ್ಕಾರು 'ದ್ವೇಷ ಭಾಷಣ' ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ

Post Comment

ಟ್ರೆಂಡಿಂಗ್‌

error: Content is protected !!