ಪಂಜಾಬ್ ಪಗ್ವಾಡ ಕಾಲೇಜಿನಲ್ಲಿ ಧರ್ಮಸ್ಥಳದ ಆಕಾಂಕ್ಷ ನಿಗೂಢ ಸಾವು ಪ್ರಕರಣಕ್ಕೆ ತಿರುವು!

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ, ಸಿವಿಲ್ ಗುತ್ತಿಗೆದಾರ ಸುರೇಂದ್ರ ಮತ್ತು ಜೆಡಿಎಸ್ ಮಾಜಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಿಂಧೂದೇವಿ ದಂಪತಿಯ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಅವರು ಪಂಜಾಬ್ ನ ಪ್ರತಿಷ್ಠಿತ ಪಗ್ವಾಡ
ಕಾಲೇಜಿನಲ್ಲಿ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಇದೀಗ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ.
ಮೂಲತ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ನಿವಾಸಿ ದೆಹಲಿಯ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಪಗ್ವಾಡ
ಕಾಲೇಜಿನ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೇ. 17ರಂದು ಸಾವನ್ನಪ್ಪಿದ ಘಟನೆಯನ್ನು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಹೇಳಲಾಗಿತ್ತು.
ಪೊಲೀಸರು ಆಕಾಂಕ್ಷ ಪೋಷಕರನ್ನು ವಂಚಿಸುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಮೃತ ಆಕಾಂಕ್ಷಳ ತಂದೆ ಧರ್ಮಸ್ಥಳದ ಸುರೇಂದ್ರನ್ ಆರೋಪಿಸಿದ್ದಾರೆ.ಮಗಳ ಸಾವಿನ ಸುದ್ದಿ ಕೇಳಿದ ಆಘಾತದಿಂದ ಪಂಜಾಬ್ ಗೆ ತೆರಳಿದ ಪೋಷಕರು ಮಗಳ ನಿಗೂಢ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಆಕಾಂಕ್ಷಾ ಪಗ್ವಾಡ ಕಾಲೇಜಿನಲ್ಲಿ ಫ್ರೊಫೆಸರ್ ಆಗಿರುವ
ಬಿಜಿಲ್ ಮ್ಯಾಥ್ಯೂ ಎಂಬ ಕೇರಳ ಮೂಲದ ವಿವಾಹಿತ ವ್ಯಕ್ತಿ ಮತ್ತು ಆಕಾಂಕ್ಷ ಪರಸ್ಪರ ಪ್ರೀತಿಸುತ್ತಿದ್ದು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೈದಿದ್ದಾಳೆ ಎಂದು ಬಿಂಬಿಸುವ ಯತ್ನಗಳು ನಡೆಯುತ್ತಿದೆಯೇ ಎಂಬ ಸಂಶಯಕ್ಕೆ ಕಾರಣವಾಗಿದೆ.
ಆಕಾಂಕ್ಷ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗು ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಹಜ ಸಾವಜನ ಬಗ್ಗೆ ಅನುಮಾನವಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.
ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ ಪಂಜಾಬಿ ಭಾಷೆಯಲ್ಲಿದ್ದ ಈ ಎಫ್.ಐ.ಆರ್ ವರದಿಯನ್ನು ಸ್ಥಳೀಯರ ಸಹಕಾರದಿಂದ ಓದಿ ತಿಳಿದಕೊಂಡಾಗ ಅದರಲಿ ತನ್ನ ಮಗಳ ಸಾವುನ ಬಗ್ಗೆ ಯಾವುದೇ ಅನುಮಾನವಿಲ್ಲ ಅದೊಂದು ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿರುವುದು ತಿಳಿದು ಬಂದಿದೆ.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮನೆಯವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದು ಇದಾದ ಬಳಿಕ ಇದೀಗ ಮತ್ತೆ ಮೃತಳ ತಂದೆ ಸುರೇಂದ್ರನ್ ಅವರಿಂದ ಮತ್ತೊಂದು ದೂರನ್ನು ಪಡೆದುಕೊಂಡಿದ್ದಾರೆ.
ಈ ದೂರಿನಲ್ಲಿ ತಮಗೆ ಮಗಳ ಸಾವಿಗೆ ಸಂಸ್ಥೆಯಲ್ಲಿ ಪ್ರಾಧ್ಯಾಪಕನಾಗಿರುವ ಸಿ.ಮ್ಯಾಥ್ಯೂ ಕಾರಣನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇದೀಗ ಆಕಾಂಕ್ಷ ತಂದೆ ತಿಳಿಸುವ ಮಾಹಿತಿಯಂತೆ ಕಾಲೇಜಿನ ಸಿ.ಸಿ ಕ್ಯಾಮರಾ ಪುಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಕೇವಲ ಆಕೆ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಕೆಳಗೆ ಬಿದ್ದಳು ಯಾರದರೂ ದೂಡಿರುವುದಾ ಅಥವಾ ಆಕೆ ಹಾರಿರುವುದಾ ಎಂದು ಎಲ್ಲಿಯೂ ಕಾಣಿಸುತ್ತಿಲ್ಲ. ಸಿ.ಸಿ.ಕ್ಯಾಮರಾ ದಾ ಪೂರ್ಣ ದಾಖಲೆಗಳನ್ನು ತೋರಿಸುವಂತೆ ಕೇಳಿದರೆ ಅದನ್ನು ನೀಡಲು ಸಿದ್ದರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು ಯಾವರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡವೇಕಾಗಿದೆ.
ಪ್ರಕರಣ ದಾಖಲಿಸುವ ಬಗ್ಗೆ ಇರುವ ಗೊಂದಲದಿಂದಾಗಿ
ಮತ್ತು ಬೇರೆ ತಿರುವು ಪಡೆಯುವ ಸಾಧ್ಯತೆ ಇರುವ ಕಾರಣ ಮರಣೋತ್ತರ ಪರೀಕ್ಷೆ ಇನ್ನೂ ನಡೆಯದಿರುವುದರಿಂದ ಪ್ರಕರಣವು ಇನ್ನಷ್ಟು ಕುತೂಹಲ, ಸಂಶಯಗಳಿಗೆ ಕಾರಣವಾಗಿದೆ.
Post Comment