ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಜಿಹಾದಿಗಳ ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣವನ್ನು ಎನ್ ಐ ಎ ಗೆವಹಿಸಿದ್ದು ದ.ಕ. ಜಿಲ್ಲೆಯ ಸಮಸ್ತ ಹಿಂದೂ ಸಮಾಜ ಸ್ವಾಗತಿಸುತ್ತಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಪಿ ಎಫ್ ಐ ಹಾಗೂ ಇನ್ನಿತರ ಜಿಹಾದಿ ಸಂಘಟನೆಗಳ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಿ ಹತ್ಯೆಯ ಹಿಂದಿರುವ ಕಾಣದ ಕೈಗಳನ್ನು ಹಾಗೂ ಈ ಸಂಚಿಗೆ ಒದಗಿಸಿದ ಹಣಕಾಸಿನ ಮೂಲಗಳನ್ನು ಪತ್ತೆಹಚ್ಚಲು NIA ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದ್ದಾರೆ.
ದ.ಕ. ಉಡುಪಿ ಹಾಗೂ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬೇರು ಬಿಟ್ಟಿರುವ ಜಿಹಾದಿಗಳನ್ನು ಮೂಲಭೂತವಾದಿ ಸಂಘಟನೆಗಳನ್ನು
ಮಟ್ಟ ಹಾಕಲು ರಾಷ್ಟ್ರೀಯ ತನಿಖಾ ದಳ ನಡೆಸುವ ತನಿಖೆ ಅತ್ಯಂತ ಸಹಕಾರಿಯಾಗಲಿದೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣದ ರಾಜಕೀಯವನ್ನು ಮುಂದುವರಿಸಿ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು NIA ಗೇ ವಹಿಸಲು ನಿರಾಕರಿಸಿದಾಗ ಪ್ರಧಾನಿ ನರೇಂದ್ರ ಮೋದಿಜೀ ಯವರ ನೇತೃತ್ವದ ಕೇಂದ್ರ ಸರ್ಕಾರ ಮುಂದಾಳತ್ವವನ್ನು ವಹಿಸಿಕೊಂಡು ತನಿಖೆಯನ್ನು NIA ಗೆವಹಿಸಿದೆ.
ಪ್ರಧಾನಿ ನರೇಂದ್ರ ಮೋದೀಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಯವರಿಗೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರಿಗೆ ಹಾಗೂ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಹಿರಿಯರಿಗೆ ಗೌರವಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post Comment