ಗುಜರಾತ್‌ ನಲ್ಲಿ ಏರ್‌ ಇಂಡಿಯಾ ವಿಮಾನ ಪತನ: 100ಕ್ಕೂ ಅಧಿಕ ಜನ ಭಸ್ಮವಾಗಿರುವ ಶಂಕೆ

ಗುಜರಾತ್‌ ನಲ್ಲಿ ಏರ್‌ ಇಂಡಿಯಾ ವಿಮಾನ ಪತನ: 100ಕ್ಕೂ ಅಧಿಕ ಜನ ಭಸ್ಮವಾಗಿರುವ ಶಂಕೆ

Share
IMG-20250612-WA0001-759x1024 ಗುಜರಾತ್‌ ನಲ್ಲಿ ಏರ್‌ ಇಂಡಿಯಾ ವಿಮಾನ ಪತನ: 100ಕ್ಕೂ ಅಧಿಕ ಜನ ಭಸ್ಮವಾಗಿರುವ  ಶಂಕೆ

ಗುಜರಾತ್ : ರಾಜ್ಯದ ಅಹಮ್ಮದಾಬಾದ್‌ ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು ಮೇಘನಿ ನಗರ ಪ್ರದೇಶದಲ್ಲಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಂಡಿದ್ದು ನೂರಾರು ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.
ಅವಘಡ ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಅಹಮ್ಮದಾಬಾದ್‌ ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ.
ಮೇಘನಿ ನಗರ ಪ್ರದೇಶದಲ್ಲಿ ಪ್ರಯಾಣಿಕರು, ಸಿಬ್ಬಂದಿಗಳು ಸೇರಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದೆ. ಸುಮಾರು 130 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ತಾಂತ್ರಿಕ ದೋಷದ ಕಾರಣಕ್ಕೆ 2 ಕಿ ಮೀಟರ್‌ ದೂರದಲ್ಲಿ ವಿಮಾನ ಪತನವಾಗಿದೆ. ಜನ ವಸತಿ ಕಟ್ಟಡ ಮೇಲೆ ವಿಮಾನ ಬಿದ್ದಿದೆ ಎಂದು ವರದಿ ತಿಳಿಸಿದೆ. ವಿಮಾನವು ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ ಗೆ ತೆರಳುತ್ತಿತ್ತು ಎನ್ನಲಾಗಿದೆ. ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ ಎಂದು ತಿಳಿದು ಬಂದಿದೆ.

Post Comment

ಟ್ರೆಂಡಿಂಗ್‌

error: Content is protected !!