ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ನಿಗೂಢ ಕೊಲೆ ಮತ್ತಿತರ ಅಪರಾಧ ಪ್ರಕರಣಗಳ ಮಾಹಿತಿ ಬಿಚ್ಚಿಡಲಿರುವ ಬೆಂಗಳೂರಿನ ವಕೀಲ!

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ.
ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ.
ಈ ಬಗ್ಗೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ,
ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಪೊಲೀಸ್ ಮೂಲಗಳು ತಿಳಿಸಿವೆ.















Post Comment