ಆಲದಪದವು : ಅಕ್ಷರ ಭಾರತಿ ವಿದ್ಯಾಲಯದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಂಟ್ವಾಳ : ಇಲ್ಲಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯ ಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು
ಜೂ 21ರಂದು ನೆರವೇರಿತು. ಅಕ್ಷರ ಭಾರತಿ ವಿದ್ಯಾಲಯದ ಸಂಚಾಲಕ ಮೋಹನ್ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಯೋಗ ಮತ್ತು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿ ಶುಭ ಹಾರೈಸಿದರು.
ಬಳಿಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರಿನ ಸಂಚಾಲಕ ನಾರಾಯಣ್ ಯೋಗದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮೋಹನ್ ಹೆಚ್ ಉಪಸ್ಥಿತರಿದ್ದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ಯೋಗದ ಪ್ರಾತ್ಯಕ್ಷಿತೆಯನ್ನು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರುಗಳಾದ ನಾರಾಯಣ್, ಅರವಿಂದ ಹಾಗೂ ತುಕರಾಮ ಗೌಡ ನಡೆಸಿಕೊಟ್ಟರು.
ಸಹ ಶಿಕ್ಷಕ ಸುಕೇಶ್ ಕೆ ಮಾಲಾಡಿ ಕಾರ್ಯಕ್ರಮ ನಿರ್ವಹಿಸಿದರು.

Post Comment