ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಮಾಹಿತಿ ಬಿಚ್ಚಿಡಲು ದ.ಕ. ಎಸ್.ಪಿ. ಕಚೇರಿಗೆ ಇಂದು ಹಾಜರಾಗಲಿರುವ ವ್ಯಕ್ತಿ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅತ್ಯಾಚಾರ-ಕೊಲೆ ಮತ್ತಿತರ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ಇದ್ದು
ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬೆಂಗಳೂರಿನಮ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಎಂಬವರ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪತ್ರಿಕಾ ಹೇಳಿಕೆ ಹಂಚಿಕೊಂಡಿದ್ದ ವ್ಯಕ್ತಿ ಮತ್ತು ವಕೀಲರು ಇಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಮೌಖಿಕವಾಗಿ ಭೇಟಿಯಾಗಿ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವ್ಯಕ್ತಿಯೊಬ್ಬ ಸೂಕ್ತ ಕಾನೂನಾತ್ಮಕ ರಕ್ಷಣೆ ಮತ್ತು ಸುರಕ್ಷತೆ ನೀಡಿದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮಾಹಿತಿಯನ್ನು ನೀಡುವುದಾಗಿ ಬೆಂಗಳೂರಿನ ವಕೀಲರ ಮೂಲಕ ಹೇಳಿಕೆ ನೀಡಿದ್ದು ಸಂಬಂಧಪಟ್ಟ ವಕೀಲರ ಮೂಲಕ ವ್ಯಕ್ತಿಯನ್ನು ದ.ಕ. ಪೊಲೀಸರು ಸಂಪರ್ಕಿಸಿ ಅಪರಾಧ ಕೃತ್ಯಗಳ ಮಾಹಿತಿ ನೀಡಲು ಸ್ವಯಂಪ್ರೇರಿತವಾಗಿ ಮುಂದಾದಲ್ಲಿ ಸೂಕ್ತ ರಕ್ಷಣೆ ನೀಡಲು ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದರು.
ಮಾಹಿತಿ ನೀಡುವ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿದ್ದರು. ಈ ಬಗ್ಗೆ ವ್ಯಕ್ತಿ ಮುಖತ: ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟೀಕರಣ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಲಿರುವ ವ್ಯಕ್ತಿಯ ಸಂಪರ್ಕದಲ್ಲಿದ್ದು ಕಾನೂನು ಸುರಕ್ಷತೆ ಬಗ್ಗೆ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಪೂರಕ ಪ್ರಕ್ರಿಯೆ ಮುಂದುವರಿಸಿದ್ದರು.
ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ನೀಡಲಿರುವ ವ್ಯಕ್ತಿಯನ್ನು ಈತನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಮತ್ತಿತರರ ನಿಯೋಗ ಇಂದು ಶುಕ್ರವಾರ ಮಧ್ಯಾಹ್ನ 12ಗಂಟೆಗೆ ದ.ಕ. ಪೊಲೀಸ್ ವರಿಷ್ಠಾಧಿಕಾರಿಯವರ ಮುಂದೆ ಹಾಜರುಪಡಿಸಲಿದ್ದಾರೆ.
ಈ ಬಗ್ಗೆ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ.
Post Comment