ಎ ಐ ವಿಡಿಯೋ ಪ್ರಸಾರ ಆರೋಪ : ಯೂಟ್ಯೂಬರ್ ‘ದೂತ’ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಎ ಐ ವಿಡಿಯೋ ಪ್ರಸಾರ ಆರೋಪ : ಯೂಟ್ಯೂಬರ್ ‘ದೂತ’ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Share
InShot_20250403_134447773-1024x616 ಎ ಐ ವಿಡಿಯೋ ಪ್ರಸಾರ ಆರೋಪ : ಯೂಟ್ಯೂಬರ್ 'ದೂತ'ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಒಂದು ಪ್ರಕರಣ ದಾಖಲಾಗಿದ್ದು ಎರಡು ಪ್ರತ್ಯೇಕ ವಿಚಾರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ದ.ಕ. ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಪೊಲೀಸರು ಮೂರು ಪ್ರಮುಖ ಅಂಶಗಳನ್ನು ಇದೀಗ ಸ್ಪಷ್ಟಪಡಿಸಿದ್ದಾರೆ. ಇನ್ನೊಂದೆಡೆ ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಗೂ ಜುಲೈ11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ವಾಸ್ತವಿಕವಾಗಿ ತಪ್ಪಾಗಿರುತ್ತದೆ.
ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT)ವನ್ನು ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ
ವ್ಯಕ್ತಿಗಳು ಹೇಳುತ್ತಿದ್ದು
ಈ ಬಗ್ಗೆ ಸಾಕ್ಷಿ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ
ಎಂದು ದ.ಕ.ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದಲ್ಲಿ ಸಾಕ್ಷಿ ದೂರುದಾರರು
ತನ್ನ ದೂರಿನಲ್ಲಿ ಹಾಗೂ ಮಾನ್ಯ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ,
ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ,
ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಆರೋಪದಲ್ಲಿ
ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) BNS ರಂತೆ ಪ್ರಕರಣ ದಾಖಲಾಗಿದೆ.

Post Comment

ಟ್ರೆಂಡಿಂಗ್‌

error: Content is protected !!