ಸೌಜನ್ಯಪರ ಹೋರಾಟಗಾರರ ಬಗ್ಗೆ ಮತ್ತು ಧರ್ಮಸ್ಥಳ ಧಾರ್ಮಿಕ ವ್ಯಕ್ತಿಗಳ ಕುರಿತು ಅಶ್ಲೀಲ ಪೋಸ್ಟ್

ಬೆಳ್ತಂಗಡಿ : ಫೇಸ್ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿರುವ ಬಗ್ಗೆ ಪ್ರವೀಣ್ ಲೊಬೋ ಎಂಬಾತನ ವಿರುದ್ಧ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕು ಕೌಕ್ರಾಡಿ ಗ್ರಾಮದ ನಿವಾಸಿ ಸಾಮಾಜಿಕ ಹೋರಾಟಗಾರ ಜಯಂತ ಟಿ (46) ಎಂಬವರ ದೂರಿನಂತೆ ಜುಲೈ 11ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್ ಎಸ್ 2023 ರಂತೆಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಧಾರ್ಮಿಕ ಶ್ರದ್ಧಾ ಕೇಂದ್ರದ ಆಡಳಿತಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶದ
ಪೋಸ್ಟ್ ಪ್ರಸಾರ ಮಾಡಿರುವ ಆರೋಪಕ್ಕೆ ಸಂಬಂಧಿಸಿ
ಧರ್ಮಸ್ಥಳ ನಿವಾಸಿ ಚೇತನ್ ಎಂಬವರು ನೀಡಿದ ದೂರಿನಂತೆ
‘ಡಾಕ್ಟರ್ ವರ್ಮ’ ಫೇಸ್ ಬುಕ್ ಪೇಜ್ ವಿರುದ್ಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ‘ಡಾಕ್ಟರ್ ವರ್ಮ ‘ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಧರ್ಮಸ್ಥಳ ಶ್ರದ್ಧಾ ಕೇಂದ್ರಕ್ಕೆ ಸಂಬಂಧಿಸಿದ ಕೆಲವು ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶ ಮತ್ತು ಅಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 296ಬಿಎನ್ ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Post Comment