ಧರ್ಮಸ್ಥಳ ನೂರಾರುಶವಗಳ ಧಫನ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಪತ್ರ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ
ವಿಶೇಷ ತನಿಖಾ ತಂಡ (ಎಸ್.ಐ.ಟಿ)ವನ್ನು ರಚಿಸಿ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ಡಾ|| ನಾಗಲಕ್ಷ್ಮೀ ಚೌಧರಿ, (ಬಿ.ಡಿ.ಎಸ್, ಎಂ.ಡಿ.ಎಸ್) ಮುಖ್ಯಮಂತ್ರಿಗೆ ಪತ್ರ ಬರೆದಿರುವ ಮಾಹಿತಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐ.ಟಿ. ರಚಿಸುವಂತೆ ಬರೆದ ಪತ್ರದಲ್ಲಿ (ಜುಲೈ 12ರಂದು ‘ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು) ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.” ಎಂದು ತಿಳಿಸಲಾಗಿದೆ.
” ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ. ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ.
ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಆರೋಪ ಮಾಡಿರುವುದನ್ನು
ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
“ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ಡಾ. ನಾಗಲಕ್ಷ್ಮೀ ಚೌಧರಿ ಅವರು ಬರೆದ ಪತ್ರದಲ್ಲಿ
ಕೋರಲಾಗಿದ್ದು ರಾಜ್ಯ ಸರಕಾರ ಮತ್ತು ವಿಶೇಷವಾಗಿ
ಗೃಹ ಇಲಾಖೆಯ ನಡೆಯನ್ನು ರಾಜ್ಯದ ಜನತೆ ಕಾದು ನೋಡುತ್ತಿದೆ.
Post Comment