ಧರ್ಮಸ್ಥಳ ನೂರಾರು ಶವಗಳ ಕಾನೂನು ಬಾಹಿರ ದಫನ ಪ್ರಕರಣ : ಸಿಎಂ ಸಿದ್ದರಾಮಯ್ಯ ಭೇಟಿಯಾದ ವಕೀಲರ ನಿಯೋಗ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ
ಧರ್ಮಸ್ಥಳದಲ್ಲಿ ಮುನ್ನೆಲೆಗೆ ಬಂದಿರುವ ನೂರಾರು ಶವಗಳ ಕಾನೂನು ಬಾಹಿರ ದಫನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಹಿರಿಯ ವಕೀಲ , ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ
ಡಾ.ಸಿ.ಎಸ್. ದ್ವಾರಕನಾಥ್ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು
ಧರ್ಮಸ್ಥಳದಲ್ಲಿ ಹೂತಿಟ್ಟ ಹಲವು ಶವಗಳ ಬಗ್ಗೆ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು. ಹಾಗೂ ಮಕ್ಕಳನ್ನು ಕಳೆದುಕೊಂಡ ಜನ ದೂರು ನೀಡಿದ್ದಾರೆ.
ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಬೇಕು, ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯಬೇಕು ಈ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
Post Comment