ಸಾಮಾಜಿಕ ಹೋರಾಟಗಾರ ಜಯಂತ್ ಟಿ ಮೇಲೆ ಕಿಡಿಗೇಡಿಗಳಿಂದ ಕೊಲೆ ಯತ್ನ : ಧರ್ಮಸ್ಥಳ ಠಾಣೆಗೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ಗೂಂಡಾಗಿರಿ ನಡೆದ
ಘಟನಾ ಸ್ಥಳದಲ್ಲಿ ಇಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಹಾಗೂ ಕೊಲೆಗೆ ಯತ್ನಿಸಿರುವುದಾಗಿ ಸಾಮಾಜಿಕ ಹೋರಾಟಗಾರ ಜಯಂತ್ ಟಿ ಅವರು ಆಗಸ್ಟ್ 11 ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ ಪೊಲೀಸರು ಈ ಬಗ್ಗೆ ಪರಿಶೀಲಿಸಿ ನಡೆಸುತ್ತಿದ್ದಾರೆ.
ಆಗಸ್ಟ್ 11ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/25 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಯೂಟ್ಯೂಬರೊ ಮೇಲೆ ಹಲ್ಲೆನಡೆಸಿದ ಆರೋಪಿಗಳು ಮತ್ತು ಬಳಿಕ ನಡೆದ ಘಟನೆಯಲ್ಲಿ ಅಕ್ರಮಕೂಟ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯಲ್ಲಿ ಭಾಗಿಯಾದ ಆರೋಪಿಗಳ ಪೈಕಿ ಬಹುತೇಕ ಅಟೋ ಚಾಲಕರು ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದು ಅಟೋ ಪಾರ್ಕ್ ಖಾಲಿ ಖಾಲಿ ಇದೆ ಎಂದು ಹೇಳಲಾಗುತ್ತಿದೆ.















Post Comment