ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ: ಹಲವರ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ: ಹಲವರ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಪ್ರಕರಣ ದಾಖಲು

Share
IMG_20250814_073653 ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ: ಹಲವರ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ, ವೇಣೂರು ಠಾಣೆ‌ಗಳಲ್ಲಿ ಪೊಲೀಸರು ಹಲವರ ವಿರುದ್ಧ
6 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮೊದಲನೇ ಪ್ರಕರಣದಲ್ಲಿ ಹುಬ್ಬಳ್ಳಿ ಚಬ್ಬಿ ಗ್ರಾಮದ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ (32ವ) ಎಂಬವರ ದೂರಿನಂತೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗಿರೀಶ ಮಟ್ಟಣ್ಣನವರ್ ಎಂಬವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ, ಜೈನರು ಹಾಗೂ ಜೈನ ಧರ್ಮದವರ ಬಗ್ಗೆ ತುಚ್ಛವಾಗಿ ಮಾತನಾಡಿರುತ್ತಾರೆ ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕನು ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಜೈನ ಧರ್ಮೀಯರ ಧಾರ್ಮೀಕ ಭಾವನೆಗಳಿಗೆ ಅಪಮಾನಿಸಿರುತ್ತಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ಆ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ:
86/2025, 0.196(1) (2) 299 2.2.2.
2023 ರಂತೆ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ವಿಜಯ (41ವ) ಎಂಬವರು ಆ.12 ರಂದು ಮದ್ಯಾಹ್ನ ತನ್ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ “ವಿಕಾಸ್ ವಿಕ್ಕಿ ಹಿಂದೂ” ಎಂಬ ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಪದಗಳನ್ನು ಬಳಸಿ ಸಾರ್ವಜನಿಕವಾಗಿ ಕಿರಿಕಿರಿಯಾಗುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 71/2025, 00:296 22-2023 ದಾಖಲಾಗಿರುತ್ತದೆ.
ಮೂರನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ಧನಂಜಯ ಜೈನ್ (47) ಎಂಬವರು ಆಗಸ್ಟ್ 12ರಂದು ಮದ್ಯಾಹ್ನ ತನ್ನ ಫೇಸ್ ಬುಕ್ ಖಾತೆಯನ್ನು ಗಮನಿಸುವಾಗ “ಏನ್ರಿ ಗೌಡ್ರೆ” ಎಂಬ ಫೇಸ್ಬುಕ್ ಖಾತೆಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಸಾರ್ವಜನಿಕವಾಗಿ ಕಿರಿಕಿರಿಯಾಗುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿದೆ
ಎಂದು ಆರೋಪಿಸಿ ನೀಡಿದ ದೂರಿನಂತೆ ಆಗಸ್ಟ್ 12ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 72/2025, ಕಲಂ:296 ಬಿಎನ್ಎಸ್ -2023ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ (51) ರವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಪರಿಶೀಲಿಸುತ್ತಿದ್ದಾಗ
ಲಾಯರ್ ಜಗದೀಶ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಪರಾಧವೆಸಗಲು ದುಷ್ಪ್ರೇರಣೆಯಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಅಕ್ರಮ ಕೂಟ ಸೇರಿ ಮಾರಕ ಆಯುಧದೊಂದಿಗೆ ಅಪರಾಧವೆಸಗಲು ಪ್ರೇರಣೆ ನೀಡಿರುವುದು ಕಂಡು ಬಂದಿದೆ ಎಂದು ಆರೋಪಿಸಿ ನೀಡಿದ ದೂರಿನಂತೆ ಆಗಸ್ಟ್ 13ರಂದು ಬೆಳ್ತಂಗಡಿ ಠಾಣಾ ಅಕ್ರ: 88/2025 ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿದೆ.
ನಾಲ್ಕನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ (51) ಎಂಬವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಪರಿಶೀಲಿಸುತ್ತಿದ್ದಾಗ, ಲಾಯರ್ ಜಗದೀಶ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ಪ್ರಸ್ತುತ ನಡೆಯುತ್ತಿರುವ ಉತ್ಖನನ ಕಾರ್ಯಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅಪರಾಧವೆಸಗಲು ದುಷ್ಪ್ರೇರಣೆಯಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಅಕ್ರಮ ಕೂಟ ಸೇರಿ ಮಾರಕಾಯುಧವನ್ನು ಬಳಕೆ ಮಾಡಿ ಅಪರಾಧವೆಸಗಲು ಪ್ರೋತ್ಸಾಹಿಸಿರುವುದು ಕಂಡುಬಂದಿರುತ್ತದೆ ಎಂಬುದಾಗಿ ಆರೋಪಿಸಿ ನೀಡಿದ ದೂರಿನಂತೆ ಆಗಸ್ಟ್ 13ರಂದು ಬೆಳ್ತಂಗಡಿ ಠಾಣಾ ಅಕ್ರ: 88/2025 ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿದೆ.

ಐದನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ (51) ಎಂಬವರು ಆಗಸ್ಟ್13 ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದ ಸಂದೇಶಗಳನ್ನು ಗಮನಿಸುವಾಗ ಸಾಮಾಜಿಕ ಜಾಲತಾಣದಲ್ಲಿ ಲೊಕೇಶ್ ಪೂಜಾರಿ ಎಂಬ ಫೇಸ್ಬುಕ್ ಖಾತೆದಾರನು ತನ್ನ ಖಾತೆಯಲ್ಲಿ, ಕೋಟಿ ಚೆನ್ನಯರಿಗೆ ಸಂಬಂಧಿಸಿದಂತೆ, ಎರಡು ಸಮುದಾಯಗಳ ನಡುವೆ ಜಾತಿಯ ಆಧಾರದಲ್ಲಿ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕರಲ್ಲಿ ಅಪಾಯದ ಭೀತಿಯುಂಟಾಗುವಂತೆ
ಸುಳ್ಳು ವದಂತಿಗಳಿರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ
ಆಗಸ್ಟ್ 13ರಂದು ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 89/2025 ಕಲಂ: 353(2) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ಆರನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ಎಂ. ಉದಯ ಪೂಜಾರಿ (41) ಎಂಬವರು ಆಗಸ್ಟ್ 13ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸುತ್ತಿರುವಾಗ ಪ್ರಕರಣದ ಆರೋಪಿ ನವೀನ್ ಜೈನ್ ಎಂಬಾತ ಯೂಟ್ಯೂಬ್ ನಲ್ಲಿ ಜನರು ಅಕ್ರಮಕೂಟ ಸೇರಿ, ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡುವಂತಹ ಅಪರಾಧಗಳನ್ನೆಸಗಲು ಹಾಗೂ ಕಾನೂನು ಬಾಹಿರ ಕೃತ್ಯಗಳಿಗೆ ದುಷ್ಪ್ರೇರಣೆಯಾಗುವಂತೆ ವಿಡಿಯೋಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದೆ ಎಂಬುದಾಗಿ ಆರೋಪಿಸಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 91/2025 ಕಲಂ: 57 ಜೊತೆಗೆ 189,190 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
ವಿವಿಧ ಠಾಣೆಗಳಲ್ಲಿ ಹಲವರ ವಿರುದ್ಧ ದಾಖಲಾಗಿರುವ 6 ಪ್ರಕರಣಗಳನ್ನು ಸ್ಥಳೀಯ ಠಾಣೆಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!