ಕುಂಟಾಲಪಲ್ಕೆ ಶಾಲಾ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಬಂದಾರು : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ಸಂಭ್ರಮದಿಂದ ಜರಗಿತು.
ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣಗೌಡ ನೆಲ್ಲಿಗೇರು ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿದ ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತ್ ಸದಸ್ಯೆಯರಾದ
ಭಾರತಿ ಕೋಡ್ಯೇಲು, ಅನಿತಾ ಕುರುಡಂಗೆ, ಮೋಹನಗೌಡ ಕೋಡ್ಯೇಲು, ಬೆಳ್ಳಿ ಹಬ್ಬದ ಸಮಿತಿ ಅಧ್ಯಕ್ಷ ಮೋನಪ್ಪ ಗೌಡ ನೆಲ್ಲಿಗೇರು, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಲಲಿತಾ ಬದ್ಯಾರು, ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷ ರಾಮಣ್ಣಗೌಡ, ಮುಖ್ಯ ಶಿಕ್ಷಕಿ ಗಾಯತ್ರಿ ಜಯಪ್ರಕಾಶ್ ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಗೆ ಕೊಡುಗೆ ನೀಡಿದ ದಾನಿಗಳಾದ ಕೃಷ್ಣಪ್ಪ ಗೌಡ ಕೋಡ್ಯೇಲು, ರಾಮಣ್ಣ ಗೌಡ ನೆಲ್ಲಿಗೇರು ಮತ್ತು ಬಾಲಕೃಷ್ಣ ಗೌಡ ಪಿಲ್ಕೊ ಇವರುಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಹ ಶಿಕ್ಷಕಿಯರು, ಊರ ಹಿರಿಯರು, ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವೃಂದ, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಭಾಗವಹಿಸಿದರು.














Post Comment