ಬಜಪೆ ಕರಂಬಾರು ಸ.ಹಿ.ಪ್ರಾ. ಶಾಲಾ 79ನೇ ಸ್ವಾತಂತ್ರೋತ್ಸವ ಆಚರಣೆ

ದಿ.ರಾಮ ದೇವಾಡಿಗ ಸ್ಮರಣಾರ್ಥ ನೂತನ ಧ್ವಜಸ್ತಂಭ ಲೋಕಾರ್ಪಣೆ
ಮಂಗಳೂರು : ಇಲ್ಲಿನ ಕರಂಬಾರು ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಬಳಿಕ ನಡೆದ ಕಾರ್ಯಕ್ರಮದ ಪ್ರಾರಂಭದಲ್ಲಿ ದಿ. ರಾಮ ದೇವಾಡಿಗರವರ ಸ್ಮರಣಾರ್ಥ ಕೊಡುಗೆಯಾಗಿ ನೂತನವಾಗಿ ನಿರ್ಮಿಸಲಾಗಿರುವ ಧ್ವಜಾಸ್ತಂಭವನ್ನು ಅವರ ಧರ್ಮಪತ್ನಿ ಸೀತಾ ದೇವಾಡಿಗರವರು ಉದ್ಘಾಟಿಸಿದರು.
ಎಸ್ ಡಿಎಂಸಿ ಅಧ್ಯಕ್ಷ ಗುಣಪಾಲ್ ದೇವಾಡಿಗ ಧ್ವಜಾರೋಹಣಗೈದು ಸಭೆಯನ್ನುದ್ದೇಶಿಸಿ ಮಾತನಾಡಿ ದಿವಂಗತ ರಾಮ ದೇವಾಡಿಗರ ಸ್ಮರಣಾರ್ಥ ಶಾಲೆಗೆ ನೂತನ ಧ್ವಜಸ್ತಂಭವನ್ನು ನಿರ್ಮಿಸಿ ಕೊಟ್ಟ ಸೀತಾ ದೇವಾಡಿಗ ಹಾಗೂ ಅವರ ಕುಟುಂಬವರ್ಗವನ್ನು ಕೃತಜ್ಞತಾ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಕರಂಬಾರು ಕೋರ್ದಬ್ಬು ದೈವಸ್ಥಾನದ ಅಧ್ಯಕ್ಷ ಜಗನ್ನಾಥ್ ಸಾಲ್ಯಾನ್, ಗ್ರಾಮಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ್ ಬಂಗೇರ, ಮಳವೂರು ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಸಮೀಕ್ಷಾ ಡಿ. ಪಿ , ನಮ್ಮ ಜವನೆರ್ ಕರಂಬಾರು ಇದರ ಅಧ್ಯಕ್ಷ ರಮೇಶ್ ಸುವರ್ಣ, ಶ್ರೀದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಓಂಕಾರ್ ಫ್ರೆಂಡ್ಸ್ ಕ್ಲಬ್ ಕೆಂಜಾರು-ಕರಂಬಾರು ಇದರ ಅಧ್ಯಕ್ಷ ಮನೋಜ್ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಕೋಶಾಧಿಕಾರಿ ವಿನೋದ್ ಅರ್ಬಿ, ಖಜಾಂಚಿ ಮಿಥುನ್ ಪೂಜಾರಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಲಾವಣ್ಯ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಉಷಾಕಿರಣ ಸ್ವಾಗತಿಸಿದರು, ಶಿಕ್ಷಕಿ ಗೀತಾ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.














Post Comment