ಬಿ.ಎಲ್.ಸಂತೋಷ್ ಅವಹೇಳನ ಪ್ರಕರಣ : ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಸೌಜನ್ಯ ಪ್ರಕರಣವೂ ಸೇರಿದಂತೆ ಧರ್ಮಸ್ಥಳದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾತನಾಡುತ್ತಾ ಯೂಟ್ಯೂಬ್ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.
ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ಅವರನ್ನು ಗುರುವಾರ ವಶಕ್ಕೆ ಪಡೆದು ಕರೆದೊಯ್ದ ಉಡುಪಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಮಹೇಶ್ ಶೆಟ್ಟಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿ ಅವರನ್ನು ಉಡುಪಿ ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳ ತಂಡ
ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು.
ಬಳಿಕ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ನ್ಯಾಯಾಲಯವು ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಜಾಗೊಳಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ.














Post Comment