ಬಿ.ಎಲ್. ಸಂತೋಷ್ ಅವಹೇಳನ ಪ್ರಕರಣ : ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿಗೆ ಮಂಜೂರಾದ ಜಾಮೀನು

ಮತ್ತೆ ಕಸ್ಟಡಿಗೆ ಕೇಳಿದ ಪೊಲೀಸರ ‘ಲೋಪ’
ಪ್ರಶ್ನಿಸಿದ ನ್ಯಾಯಾಧೀಶರು !
ಬೆಳ್ತಂಗಡಿ : ಧರ್ಮಸ್ಥಳ ಸೌಜನ್ಯ ಪ್ರಕರಣವೂ ಸೇರಿದಂತೆ ಧರ್ಮಸ್ಥಳದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾತನಾಡುತ್ತಾ ಯೂಟ್ಯೂಬ್ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.
ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ
ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರಿಂದ
ಬಂಧನಕ್ಕೊಳಕ್ಕೊಳಗಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಶನಿವಾರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.
ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ಗುರುವಾರ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಕ್ಕೊಳಗಾಗಿದ್ದರು.
ಆ.21 ರಂದು ಬೆಳಗ್ಗೆ ಉಜಿರೆಯ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿ ಅವರನ್ನು ಉಡುಪಿ ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳ ತಂಡ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಹಿರಿಯಡ್ಕ ಜೈಲಿನಲ್ಲಿದ್ದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಶನಿವಾರ (ಆ.23) ಜಾಮೀನು ಮಂಜೂರುಗೊಳಿಸಿದೆ.
ಕಳೆದ ಗುರುವಾರ (ಆ.21) ಬ್ರಹ್ಮಾವರ ಪೊಲೀಸರು ಉಜಿರೆಯ ತಿಮರೋಡಿ ನಿವಾಸಕ್ಕೆ ತೆರಳಿ ವಶಕ್ಕೆ ಪಡೆದಿದ್ದು ಕೆಲ ಹೊತ್ತು ಪ್ರಹಸನಕ್ಕೆ ಕಾರಣವಾಗಿತ್ತು. ಅದೇ ದಿನ ಪೊಲೀಸರು ಕೋರ್ಟ್ ಎದುರು ಅವರನ್ನು ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು.ಆದರೆ ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಷರತ್ತು ಬದ್ಧ ಜಾಮೀನು ಮಂಜೂರು ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆಯು ಆ. 23ರಂದು ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆದಿದ್ದು ಅರ್ಜಿ ವಿಚಾರಣೆ ವೇಳೆ ಸಹಾಯಕ ಸರಕಾರಿ ಅಭಿಯೋಜಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯದ ಮುಂದೆ ನಿವೇದನೆ ಮಾಡಿದ್ದಾರೆ. ಅದರಂತೆ ಮಧ್ಯಾಹ್ನ ಒಂದು ಗಂಟೆಯ ಒಳಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿತ್ತು. ಆದರೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ಪೊಲೀಸ್ ಭದ್ರತೆಯಲ್ಲಿ ಮಧ್ಯಾಹ್ನ ಕೋರ್ಟಿಗೆ ಹಾಜರು ಪಡಿಸಿದ ಸಂದರ್ಭ ಪೊಲೀಸರನ್ನೇ ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ನಿಮ್ಮಲ್ಲೇ ಲೋಪ ಇರುವಾಗ ಮತ್ತೆ ಕಸ್ಟಡಿಗೆ ಯಾಕೆ ಎಂದು ಪ್ರಶ್ನಿಸಿ ಮಧ್ಯಾಹ್ನ 3.30 ಕ್ಕೆ ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚಿಸಿದ್ದರು.
ಸಂಜೆ ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯವು ಮಹೇಶ್ ಶೆಟ್ಟಿ ತಿಮರೋಡಿ ಅವರ ಅರೋಗ್ಯದ ಹಿತ ದೃಷ್ಟಿಯಿಂದ ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ.
.














Post Comment