ಧರ್ಮಸ್ಥಳ ವಿರುದ್ಧ ಅಪಪ್ರಚಾರ ಪ್ರಕರಣ : ಬೆಳ್ತಂಗಡಿ ಠಾಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ.

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ. ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ
ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಎರಡು ದಿನಗಳ ಹಿಂದೆ ನಿರೀಕ್ಷಣಾ ಜಾಮೀನು ಪಡೆದುಕೊಂಡ ಬೆನ್ನಲ್ಲೇ ಆ.24 ರ ಭಾನುವಾರ ಬೆಳಗ್ಗೆ 1ಗಂಟೆಗೆ ಒಟ್ಟು ನಾಲ್ಕು ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ಅವರ ಕಚೇರಿಗೆ ರಾಶಿಗಟ್ಟಲೆ ದಾಖಲೆಗಳನ್ನು ಹಿಡಿದುಕೊಂಡು ವಕೀಲರ ಜೊತೆ ಹಾಜರಾಗಿದ್ದಾರೆ.
ಸಮೀರ್ ಎಂ.ಡಿ. ಅವರನ್ನು ಸುಮಾರು 3 ಗಂಟೆಗಳಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಇಚ್ಛಿಸದ ಕಾರಣ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಬರುವುದಾಗಿ ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಲು ಅವಕಾಶ ಕಲ್ಪಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಪೊಲೀಸ್ ಠಾಣೆಗೆ ಹಾಜರಾದ ಸಮೀರ್ ವಿಚಾರಣೆ ಇನ್ನೂ ಮುಂದುವರಿದಿದೆ. ಪೊಲೀಸರ ವಿಚಾರಣೆ ವೇಳೆ ನೀಡುವ ಹೇಳಿಕೆಯ ಆಧಾರದಲ್ಲಿ ಸಮೀರ್ ಕಾನೂನಾತ್ಮಕ ಭವಿಷ್ಯ ನಿರ್ಧಾರವಾಗಲಿದೆ.














Post Comment