ತಿಮರೋಡಿ, ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಮತ್ತೆ ಪ್ರಕರಣ ದಾಖಲು


ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಂಚಿದ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಆಗಸ್ಟ್ 31ನೇ ಭಾನುವಾರ ಮತ್ತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್. ಎಂಬಾತ ನೀಡಿದ ದೂರಿನಂತೆ ಸೌಜನ್ಯಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ವಿರುದ್ಧ ಪೊಲೀಸರು ಪ್ರಕರಣ
ದಾಖಲಿಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಸಮಾಜದ ಸೌಹಾರ್ದ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್. ದೂರು ನೀಡಿದ್ದು ಆ.30ರಂದು ಯುಟ್ಯೂಬ್‌ನಲ್ಲಿ ಕಂಡ ವಿಡಿಯೊವೊಂದರಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಮೂಲಕ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸಮಾಜದ ಸ್ವಾಸ್ಥ್ಯ ಕದಡುವ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮದನ್ ಬುಗಡಿ ಎಂಬಾತನನ್ನು ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ತಪ್ಪು ಮಾಹಿತಿಯನ್ನು ಮಾಧ್ಯಮಗಳ ಮುಂದೆ ಪ್ರಕಟಿಸಿ ಸಮಾಜವನ್ನು ಋಎ.ವಂಚಿಸಿ ಮಾನವ ಹಕ್ಕು ಆಯೋಗದ ಪ್ರಾಮಾಣಿಕತೆಯನ್ನು ಶಂಕಿಸುವಂತೆ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿದ್ದು ಇನ್ನೊಂದೆಡೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.
ಬಿಎನ್ ಎಸ್ ಕಲಂ 204, 319(2), 353(2), ಮತ್ತು 3(5) ಪ್ರಕಾರ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಮದನ್ ಬುಗಡಿ ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕ್ರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿ ವಿಡಿಯೋ ಹಂಚಿಕೊಂಡ ಆರೋಪದಲ್ಲಿ ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ ರಾಹೇಂದ್ರ ದಾಸ್ ಡಿ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲವಾಗಿ ಮಾತನಾಡುವ ವಿಡಿಯೋವನ್ನು ಜನತಾ ನ್ಯೂಸ್ ನಲ್ಲಿ ಹಂಚಿಕೊಂಡಿದ್ದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅದರಂತೆ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ 296ಬಿ.ಎನ್.ಎಸ್. ನಂತೆ ಪ್ರಕರಣ ದಾಖಲಿಸಿದ್ದಾರೆ. ********************************************

*********************************************


********************************************















Post Comment