ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ರಾಯಚೂರು ಜಿಲ್ಲೆಗೆ ಗಡಿಪಾರು

ದ.ಕ. ಜಿಲ್ಲೆಯಿಂದ ಒಂದು ವರ್ಷ ಕಾಲ ಗಡಿಪಾರು ಆದೇಶ ಜಾರಿ
ಬೆಳ್ತಂಗಡಿ : ಕೆಲವು ವರ್ಷಗಳಿಂದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 30ಕ್ಕೂ ಅಧಿಕ ಪ್ರಕರಣಗಳಿಗೆ ಸಂಬಂಧಿಸಿ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ಸಲ್ಲಿಸಿದ್ದ ವರದಿಯನ್ನು ಪರಿಶೀಲನೆ ನಡೆಸಿದ್ದು ಇದೇ ವರದಿಯ ಆಧಾರದಲ್ಲಿ ಸೆ.18-2025ರಂದು ಮಹೇಶ್ ಶೆಟ್ಟಿ ತಿಮರೋಡಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ. ಗಡಿಪಾರು ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಪ್ರಕ್ರಿಯೆ ಬಗ್ಗೆ ಕಾನೂನು ಕ್ರಮಕೈಗೊಳ್ಳಲಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಗೆ ದ.ಕ. ಜಿಲ್ಲೆಯಿಂದ ಒಂದು ವರ್ಷ ಕಾಲ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು(ಎಸಿ) ಆದೇಶ ಹೊರಡಿಸಿರತ್ತಾರೆ. ಅವರಿಗೆ ಅದನ್ನು ಜಾರಿ ಮಾಡಲಾಗುತ್ತದೆ. ಗಡಿಪಾರು ಆದೇಶದ ಬಗ್ಗೆ ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.
ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶವಿದೆ. ಗಡಿಪಾರು ಆದೇಶದ ಬಗ್ಗೆ ಪೊಲೀಸರ ಪರವಾಗಿ ಬಂಟ್ವಾಳ ಡಿವೈಎಸ್ಪಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿಪರ ವಕೀಲರು ವಾದ ಮಂಡಿಸಿದರು.















Post Comment