ಇಂದು ಬೆಳ್ತಂಗಡಿ ‘ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ’: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಇಂದು ಬೆಳ್ತಂಗಡಿ ‘ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ’: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

Share
IMG_20251010_232304 ಇಂದು ಬೆಳ್ತಂಗಡಿ     'ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ': ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ : ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅ11ನೇ ಶನಿವಾರ ಇಂದು ಬೆಳ್ತಂಗಡಿಗೆ ಆಗಮಿಸಲಿದ್ದು ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರವರ ಕನಸಿನ ಕೂಸು, ತಾಲೂಕಿನ‌ ಜನತೆಯ ಬಹುದಿನಗಳ‌ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ
ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ಅವರು ಸೆ11ರಂದು ಬೆಳ್ತಂಗಡಿಗೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು ಪುಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ (ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ) ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ, ಮಾಲಾಡಿ ಸಬರ ಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಂತ್ಯಾರು ಇದರ ಉದ್ಘಾಟನೆ, ಕಾಶಿಬೆಟ್ಟುವಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಉಜಿರೆ ಇದರ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದರು.

IMG_20251010_232559 ಇಂದು ಬೆಳ್ತಂಗಡಿ     'ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ': ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಬೆಳ್ತಂಗಡಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಬೆಳ್ತಂಗಡಿ, ಇದರ ಶಿಲಾನ್ಯಾಸ, ಹಾಗೂ 94 ಸಿ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮಗಳಿಗೆ ಉಸ್ತುವಾರಿ ಸಚಿವರು ಸಾಕ್ಷಿಯಾಗಲಿದ್ದಾರೆ.

ಮಧ್ಯಾಹ್ನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳಿಂದ ವಿವಿಧ ನಿಗಮಗಳ ಅಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನು ಸನ್ಮಾನ ನಡೆಯಲಿದೆ ಎಂದರು.

IMG_20251004_110442-6 ಇಂದು ಬೆಳ್ತಂಗಡಿ     'ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ': ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬ್ಲಾಕ್ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಕಾಶೀಪಟ್ಣ, ನಾಗೇಶ್ ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪದನಾಭ ಸಾಲಿಯಾನ್ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್, ಪುನೀತ್ ಕುಮಾರ್ ಮಾಲಾಡಿ, ಶೋಭಾ ನಾರಾಯಣ ಗೌಡ ರಾಘವೇಂದ್ರ ಮೇಲಂತಬೆಟ್ಟು ಮತ್ತಿತರರಿದ್ದರು.

Screenshot_20251010_135431_WhatsApp-802x1024 ಇಂದು ಬೆಳ್ತಂಗಡಿ     'ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ': ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

Post Comment

ಟ್ರೆಂಡಿಂಗ್‌

error: Content is protected !!