ಹಳೆಯ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ವಿವಿಧ ಸರಣಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಜ್ಯ ಉಚ್ಛ ನ್ಯಾಯಾಲಯದಿಂದ ತಡೆಯಾಜ್ಞೆ ಸಿಕ್ಕಿದ ಬೆನ್ನಲ್ಲೇ ನ್ಯಾಯಾಲಯಕ್ಕೆ ಹಾಜರಾಗಲು ಬಾಕಿಯಿದ್ದ , ಕೆಲವು ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಗಡಿಪಾರು ಪ್ರಕರರಣವೂ ಸೇರಿದಂತೆ ಇತರ ಸರಣಿ ಪ್ರಕರಣಗಳನ್ನು ಎದುರಿಸುತ್ತಾ ಕಾನೂನಾತ್ಮಕ ಸಂಕಷ್ಟದಲ್ಲಿ ಸಿಲುಕಿದ್ದ ಕಾರಣ ಕೆಲವು ಸಮಯಗಳಿಂದ ವಾಯಿದೆಗೆ ನ್ಯಾಯಾಲಯಕ್ಕೆ ಹಾಜರಾಗಲು ಬಾಕಿಯಾಗಿತ್ತು. ಹಳೆಯ ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿದ್ದ
ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನ್ಯಾಯಾಲಯಕ್ಕೆ ಸೋಮವಾರ ಹಾಜರಾಗಿದ್ದಾರೆ.

















Post Comment