ಧರ್ಮಸ್ಥಳ ಸಮೂಹ ದಫನ ಪ್ರಕರಣ : ಹೈಕೋರ್ಟ್ ಮೆಟ್ಟಿಲೇರಿದ ಸೌಜನ್ಯ ತಾಯಿ

74 ನಾಪತ್ತೆ ಪ್ರಕರಣಗಳನ್ನು ಎಫ್.ಐ.ಆರ್. ದಾಖಲಿಸಿ ತನಿಖೆ ನಡೆಸಲು ಆದೇಶಿಸುವಂತೆ ಪಿಐಎಲ್ ಅರ್ಜಿ
ಬೆಂಗಳೂರು : ಧರ್ಮಸ್ಥಳ ನೂರಾರು ಶವಗಳ ಕಾನೂನು ಬಾಹಿರ ದಫನ ಪ್ರಕರಣಕ್ಕೆ ಸಂಬಂಧಿಸಿದ ಎಸ್ ಐ ಟಿ ತರಾತುರಿಯಲ್ಲಿ ವರದಿ ಸಲ್ಲಿಸುವ ತಯಾರಿಯಲ್ಲಿರುವಾಗಲೇ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮಧ್ಯ ಪ್ರವೇಶಿಸಿ ಧರ್ಮಸ್ಥಳ ಪ್ರಕರಣ ತಮಗ್ರ ತನಿಖೆ ನಡೆಸಿಲ್ಲ ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಪತ್ರ ಬರೆದು ಚುರುಕು ಮುಟ್ಟಿಸಿದ ಬೆನ್ನಲ್ಲೇ ಇನ್ನೊಂದೆಡೆ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿ 74 ಪ್ರಕರಣಗಳ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳುವಂತೆ ಸೌಜನ್ಯ ತಾಯಿ ಕುಸುಮಾವತಿ ಚಂದಪ್ಪ ಗೌಡ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದು ಅರ್ಜಿಯಲ್ಲಿ ಧರ್ಮಸ್ಥಳ ಪತ್ತೆಯಾಗಿರುವ ಎಲ್ಲಾ ಅನಾಥ ಶವಗಳು ಮತ್ತು ನಾಪತ್ತೆ ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಲು ಆದೇಶ ನೀಡುವಂತೆ ಮನವಿ ಮಾಡಿ ಕೊಂಡಿದ್ದಾರೆ.
ಮಾಹಿತಿಗಳ ಪ್ರಕಾರ ಬೇರೆ ಬೇರೆ ಠಾಣೆಗಳಲ್ಲಿ 74 ನಾಪತ್ತೆ ಪ್ರಕರಣಗಳು ದಾಖಲಾಗಿದ್ದು ಈ ಎಲ್ಲಾ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಮನವಿ ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪೊಲೀಸ್ ಠಾಣೆ
ಮೊ.ಸಂ.39/2025 ಕಲಂ 211(ಎ) ಬಿಎನ್ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಈ ಬಗ್ಗೆ ಸ್ಥಳೀಯ ಇತರ ಠಾಣೆಗಳಲ್ಲಿ ದಾಖಲಾಗಿರಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ಸರಕಾರ ರಚಿಸಿರುವ ಎಸ್ ಐ ಟಿ ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ ,ಕೊಲೆ ಪ್ರಕರಣಗಳೂ ಸೇರಿದಂತೆ ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಬಗ್ಗೆ ಅಕ್ಟೋಬರ್ 31ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಎಸ್ ಐ ಟಿ ಮುಖ್ಯಸ್ಥರಿಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸದಿರುವ ಅಸಮಾಧಾನ ವ್ಯಕ್ತಪಡಿಸಿ ಚುರುಕು ಮುಟ್ಟಿಸಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಇದೀಗ ಸೌಜನ್ಯ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದು ಧರ್ಮಸ್ಥಳ ಕಾನೂನುಬಾಹಿರ ಶವ ದಫನ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಯಾವ ದಿಕ್ಕಿನತ್ತ ಕೊಂಡೊಯ್ಯಲಿದೆ ಎಂಬ ಕುತೂಹಲ ಜನರಲ್ಲಿ ಮೂಡಿದೆ.

















Post Comment