ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ : ಬೆಳ್ತಂಗಡಿಯ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ : ಬೆಳ್ತಂಗಡಿಯ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ

Share
IMG-20251117-WA0010-470x1024 ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ : ಬೆಳ್ತಂಗಡಿಯ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ

ಬೆಳ್ತಂಗಡಿ : ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ನವೆಂಬರ್ 15ರಂದು ಗುಲ್ಬರ್ಗ ಜಿಲ್ಲೆಯ ಬಂದೇನವಾಝ್ ನಲ್ಲಿ ಜರಗಿದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ ಪಡೆದು ಬೆಳ್ತಂಗಡಿ ತಾಲೂಕಿನ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾನೆ.
ಬಂಟ್ವಾಳ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಅಲ್ ಖಾದಿಸ ಕಾವಳಕಟ್ಟೆ ಇಲ್ಲಿ ಹಿಫ್ಲ್, ಓದುತ್ತಿರುವ ಸೈಯ್ಯದ್ ಮಹಮ್ಮದ್ ಉವೈಸ್ ‘ಸ್ಟಾರ್ ಲೈನ್’ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯಾದ ಸೈಯ್ಯದ್ ಅಯ್ಯುಬ್ ಹಾಗೂ ನೂರುಶಬ ದಂಪತಿಯ ಪುತ್ರ.
ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ನ ಬೆಳ್ತಂಗಡಿ ಲಾಯಿಲಾ ಘಟಕದ ವಿದ್ಯಾರ್ಥಿಯಾಗಿದ್ದು ಬೆಳ್ತಂಗಡಿ ಸೆಕ್ಟರ್ ಮತ್ತು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಮೂರನೇ ಬಾರಿ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಉರ್ದು ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಈತ ಜಮ್ಮು ಕಾಶ್ಮೀರ ಮುಂತಾದ ರಾಜ್ಯದ ವಿದ್ಯಾರ್ಥಿಗಳ ಪ್ರಬಲ ಪೈಪೋಟಿಯ ನಡುವೆಯೂ ತನ್ನ ಮಾತಿನ ವಿಶೇಷ ಕೌಶಲ್ಯವನ್ನು ರಾಷ್ಟ್ರಮಟ್ಟದಲ್ಲಿ ಮೆರೆದಿದ್ದಾನೆ.
ತನ್ನ ಹೆತ್ತವರು, ಶಿಕ್ಷಕರು ತಾಲೂಕು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುವ ಸೈಯ್ಯದ್ ಮಹಮ್ಮದ್ ಉವೈಸ್ ಇವರಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

InShot_20251003_220916895-20-1024x1024 ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ : ಬೆಳ್ತಂಗಡಿಯ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ

Post Comment

ಟ್ರೆಂಡಿಂಗ್‌

error: Content is protected !!