ಡಿಸೆಂಬರ್ 21- 22ಕ್ಕೆ ಬದನಾಜೆ ಶಾಲಾ ಅಮೃತ ಮಹೋತ್ಸವ ಸಮಾರಂಭ : ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ಡಿಸೆಂಬರ್ 21 ಮತ್ತು 22ರಂದು ನೆರವೇರಲಿರುವ
ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ನವೆಂಬರ್ 30ರಂದು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬುಗೌಡ ಬಾಜಿಮಾರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಬದನಾಜೆ ಶಾಲಾ ಅಮೃತ ಮಹೋತ್ಸವವು ಡಿಸೆಂಬರ್ 21 ಮತ್ತು 22ರಂದು ನೆರವೇರಲಿದ್ದು ಶಾಲಾ ಹಿರಿಯ ವಿದ್ಯಾರ್ಥಿಗಳ, ಊರ ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡ ‘ಸುಜ್ಞಾನ ಸಭಾಂಗಣ’ದ ಲೋಕಾರ್ಪಣೆಯು ನಡೆಯಲಿದೆ.
ಕಾರ್ಯಕ್ರಮವು ಶಾಸಕರು, ಸಂಸದರು ಸೇರಿದಂತೆ ವಿವಿಧ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಲಿದೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಶಾಲಾ ಮಕ್ಕಳಿಂದ ಯಕ್ಷಗಾನ, ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ‘ಎಸ್.ಡಿ.ಎಂ.ಕಲಾ ವೈಭವ’ ಮತ್ತು ಸಮಾರೋಪ ಸಮಾರಂಭದ ಬಳಿಕ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಅಭಿನಯದ ‘ಆಂಟಿ ಬೊಕ್ಕ ಅಂಕಲ್’ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನ
ಗೊಳ್ಳಲಿದೆ. ಕಾರ್ಯಕ್ರಮದ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
















Post Comment