ಪ್ರಥಮ ಗಡಿಪಾರು ಆದೇಶಕ್ಕೆ ಕೋರ್ಟ್ ತಡೆ ತಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ನೋಟಿಸ್ ಜಾರಿ!

ಬೆಳ್ತಂಗಡಿ : ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಗಡಿಪಾರು ಆದೇಶ ಎದುರಿಸಿ ಕಾನೂನು ಹೋರಾಟದ ಮೂಲಕ ಆದೇಶಕ್ಕೆ ನ್ಯಾಯಾಲಯದಿಂದ ತಡೆ ತಂದಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರು ನೋಟೀಸ್ ನೀಡಿರುವುದಾಗಿ ತಿಳಿದು ಬಂದಿದೆ.
ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ ತಿಂಗಳಲ್ಲಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು. ಬಳಿಕ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಮತ್ತು “ಬಲವಂತದ ಕ್ರಮ ಬೇಡ.. ಎಂದು ಸೂಚಿಸಿತ್ತು. ಆದರೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಎ ಸಿ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದ್ದು ಡಿ.8 ರಂದು ಪುತ್ತೂರು ಎ ಸಿ ಮುಂದೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚನೆ ನೀಡಿದೆ.
ಈಗ ನೀಡಿರುವ ನೋಟೀಸ್ ನಲ್ಲಿ ಮತ್ತೆ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಇದೀಗ ಎಸಿ ಅವರು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು ಪರ – ವಿರೋಧದ ವಿವಾದಕ್ಕೆ ಕಾರಣವಾಗುತ್ತಿದೆ.
















Post Comment