ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ’ಪ್ರತಿಭಾ ಪುರಸ್ಕಾರ’ ಸಮಾರಂಭ ಡಿ: 24ಕ್ಕೆ

ಬೆಳ್ತಂಗಡಿ : ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಪ್ರತಿಭಾ ಪುರಸ್ಕಾರ ಸಮಾರಂಭವು ಡಿಸೆಂಬರ್ 24-2025ನೇ ಬುಧವಾರದಂದು ಜರಗಲಿದೆ.
ಪ್ರತಿಭಾ ಪುರಸ್ಕಾರ ಸಮಾರಂಭದಂದು ಪೂರ್ವಾಹ್ನ ಅವಧಿಯಲ್ಲಿ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿ ಗಣ್ಯರಿಂದ ಬಹುಮಾನ ವಿತರಣೆ, ಮಧ್ಯಾಹ್ನ ಅವಧಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.
ಹಳೆ ವಿದ್ಯಾರ್ಥಿಗಳಿಗೆ, ಪೋಷಕರ ಕ್ರೀಡಾಕೂಟದ ಬಹುಮಾನ ವಿತರಣೆ ನೆರವೇರಲಿದೆ.

ಈ ಕಾರ್ಯಕ್ರಮದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ವಿದ್ಯಾಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಂದಾರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಉಮೇಶ ಗೌಡ ಪೊಯ್ಯೊಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತು ಮುಖ್ಯೋಪಾಧ್ಯಾಯರಾದ ವಿಶ್ವನಾಥ ಅವರು ವಿನಂತಿಸಿಕೊಂಡಿದ್ದಾರೆ.

















Post Comment