ಬಂದಾರು ಶಾಲಾ ನೂತನ ಶೌಚಾಲಯ ಉದ್ಘಾಟನೆ

ಎಂ ಆರ್ ಪಿ ಎಲ್ ನ 10 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ
ಬೆಳ್ತಂಗಡಿ : ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿ ಎಂ ಆರ್ ಪಿ ಎಲ್ (ಸಿಎಸ್ ಆರ್ ) ಅನುದಾನದ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶೌಚಾಲಯವನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ಉದ್ಘಾಟಿಸಿದರು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪಾವತಿ, ಎಸ್ ಡಿಎಂಸಿ ಅಧ್ಯಕ್ಷ ಉಮೇಶ್ ಗೌಡ ಪೊಯ್ಯೊಳೆ , ಕುಪ್ಪೆಟ್ಟಿ ಸಿಆರ್ ಪಿ ವಾರಿಜಾ, ಮುಖ್ಯೋಪಾಧ್ಯಾಯರಾದ ವಿಶ್ವನಾಥ್ , ಗ್ರಾಮಪಂಚಾಯತ್ ಸದಸ್ಯೆ ವಿಮಲಾ, ಮಾಜಿ ಅಧ್ಯಕ್ಷೆ ಪರಮೇಶ್ವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಪೋಷಕರು ಇದ್ದರು.















Post Comment