ಫೆಬ್ರವರಿ 02ರಂದು ಬೆಳ್ತಂಗಡಿಯಲ್ಲಿ ಗ್ರಾಮಸಂಗ್ರಾಮ್ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ಫೆ 2ನೇ ಸೋಮವಾರದಂದು ಬೆಳ್ತಂಗಡಿಯಲ್ಲಿ ನಡೆಯಲಿದೆ.
ಬೆಳಿಗ್ಗೆ 10ಗಂಟೆಗೆ ಲಾಯಿಲ ಸಂಗಮ ಸಭಾಭವನದ ವಠಾರದಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ , ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಮುಂತಾದ ಮುಖಂಡರುಗಳು ಭಾಗಿಯಾಗಲಿದ್ದಾರೆ.














Post Comment