ಸದನದಲ್ಲಿ ಸುಮಂತ್ ಪ್ರತಿಧ್ವನಿ

ಸದನದಲ್ಲಿ ಸುಮಂತ್ ಪ್ರತಿಧ್ವನಿ

Share

ಸುಮಂತ್ ಪ್ರಕರಣದ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ತಾಲೂಕಿನ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ನಿಸ್ಪಕ್ಷಪಾತವಾಗಿ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.
ಸದನದಲ್ಲಿ ಸುಮಂತ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಯ ಮೂಲಕ ಗೃಹ ಸಚಿವ ಜಿ.ಪರಮೇಶ್ವರ್ ಅವರ ಗಮನಸೆಳೆದ ಶಾಸಕ ಹರೀಶ್ ಪೂಂಜ ಇಡೀ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.
ಈ ಪ್ರಕರಣಕ್ಕೆ ಶೀಘ್ರವಾಗಿ ನ್ಯಾಯ ಕೊಡಿಸಬೇಕು ಮತ್ತು ಸತ್ಯಾಸತ್ಯತೆಯನ್ನು ಸಮಾಜಕ್ಕೆ ತಿಳಿಯುವಂತೆ ಮಾಡಬೇಕು
ಶೀಘ್ರವಾಗಿ ಸುಮಂತ್ ಸಾವಿನ ಪ್ರಕರಣದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ.ಪರಮೇಶ್ವರ್ ಶಾಸಕ ಹರೀಶ್ ಪೂಂಜ ಎತ್ತಿದ ಪ್ರಶ್ನೆ ಗಂಭೀರವಾದುದು ಈ ಬಗ್ಗೆ ಈಗಾಗಲೇ ಕ್ರಮಕೈಗೊಂಡಿದ್ದೇವೆ, ಬಾಲಕನ ತಲೆಗೆ ಏಟು ಬಿದ್ದಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ನಾಲ್ಕು ತಂಡಗಳನ್ನು ರಚಿಸಿ ತನಿಖೆ ನಡೆಸಿದ್ದಾರೆ, ಇದು ಕೊಲೆಯಾಗಿದ್ದರೆ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚುತ್ತಾರೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಲಘುವಾಗಿ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

Post Comment

ಟ್ರೆಂಡಿಂಗ್‌

error: Content is protected !!