ಕಾರ್ಮಿಕಪರ ಕಾನೂನುಗಳ ರದ್ದತಿ, ರೈತ ವಿರೋಧಿ ಬೀಜ ಮಸೂದೆ ಜಾರಿ, ಉದ್ಯೋಗ ಖಾತ್ರಿ ಯೋಜನೆ ತಿದ್ದುಪಡಿ ವಿರೋಧಿಸಿ ರೈತ, ಕಾರ್ಮಿಕರ ಮುಷ್ಕರ – ರಸ್ತೆ ತಡೆ

ಬೆಳ್ತಂಗಡಿ : 29 ಪ್ರಮುಖ ಕಾರ್ಮಿಕಪರ ಕಾನೂನುಗಳನ್ನು ರದ್ದುಗೊಳಿಸಿರುವ ವಿರುದ್ಧ ಹಾಗೂ ಕಾರ್ಪೊರೇಟ್ ಪರ ರೂಪಿಸಿರುವ 4 ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಸೇರಿದಂತೆ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಭಾಗವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಮುಷ್ಕರ ಮತ್ತು ಮುಖ್ಯ ರಸ್ತೆಯ ಮೂರು ಮಾರ್ಗದ ಬಳಿ ರಸ್ತೆ ತಡೆ ನಡೆಯಿತು.
ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಸಿಐಟಿಯು ಜಿಲ್ಲಾಧ್ಯಕ್ಷ ಬಿ.ಎಂ. ಭಟ್ ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳನ್ನು ರಕ್ಷಣೆ ಮಾಡುತ್ತೇನೆ, ಉದ್ಧಾರ ಮಾಡುತ್ತೇನೆ ಎಂದು ಬೊಗಳೆ ಬಿಡುತ್ತಾ ಟ್ರಂಪ್, ಅಡಾನಿ, ಅಂಬಾನಿಗಳ ಹಿತ ಕಾಪಾಡುತ್ತಿದ್ದಾರೆ, ಅಂಬಾನಿ, ಅಡಾನಿಗಳ ಗುಲಾಮರಾಗಿದ್ದಾರೋ ಗೊತ್ತಿಲ್ಲ ಆದರೆ ಕಾರ್ಮಿಕರ, ರೈತರ ಹಕ್ಕುಗಳನ್ನು ನಾಶ ಮಾಡಿ ಕಾರ್ಮಿಕರನ್ನು, ರೈತರನ್ನು ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ದೂಡುತ್ತಿದ್ದಾರೆ, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಿ , ಕಾರ್ಮಿಕ ಚಳುವಳಿಯನ್ನು ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೋರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣ ದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದರು. ಪ್ರಾಂತ ರೈತ ಸಂಘದ ಮುಖಂಡರಾದ ಲಕ್ಷ್ಮಣ ಗೌಡ ಕಳೆಂಜ, ಶ್ಯಾಮರಾಜ್ ಪಟ್ರಮೆ ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದರು. ಸಿಐಟಿಯು ಸಹ ಕಾರ್ಯದರ್ಶಿ ಈಶ್ವರಿ ಶಂಕರ್, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ವಿನೋದ, ಜೆಎಂಎಸ್ ಜಿಲ್ಲಾಧ್ಯಕ್ಷೆ ಕಿರಣಪ್ರಭ, ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ವಿನುಷರಮಣ, ಆದಿವಾಸಿಹಕ್ಕುಗಳ ಸಮಿತಿ ತಾಲೂಕು ಅಧ್ಯಕ್ಷ ಸುಕುಮಾರ್ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ದೇವಕಿ, ಡಿವೈಎಫ್ ಐ ತಾಲೂಕು ಅಧ್ಯಕ್ಷೆ ಕು.ಅಧಿತಿ, ಕಾರ್ಯದರ್ಶಿ ಅಭಿಷೇಕ್ ಮುಂತಾದವರು ಉಪಸ್ಥಿತರಿದ್ದರು.
ಕೇಂದ್ರ ಸರಕಾರವು ಭಾರತದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಬಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನು, ಹತ್ತಿಕಲು














Post Comment