ಬೆಳ್ತಂಗಡಿ ; ಅನಿಲ ಸೋರಿಕೆ: ಅಂಗಡಿಗಳಿಗೆ ಬೆಂಕಿ ಹಾನಿ – ಕೆಲಸದಾಕೆ ಮೂರ್ಛೆ!

ಬೆಳ್ತಂಗಡಿ ; ಅನಿಲ ಸೋರಿಕೆ: ಅಂಗಡಿಗಳಿಗೆ ಬೆಂಕಿ ಹಾನಿ – ಕೆಲಸದಾಕೆ ಮೂರ್ಛೆ!

Share

ಬೆಂಕಿ ಕೆನ್ನಾಲಿಗೆಗೆ ಸಾಮಾಗ್ರಿ ಭಸ್ಮ!

ಬೆಳ್ತಂಗಡಿ : ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆಯ ಹೆರಾಜೆ ಕಾಂಪ್ಲೆಕ್ಸ್ ನ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.
ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅನಾಹುತದಿಂದ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಘಟನೆಯನ್ನು ನೋಡಲು ನೂರಾರು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದೆ ವೇಳೆ ಬೆಂಕಿ ಘಟನೆಯನ್ನು ನೋಡುತ್ತಿದ್ದ ಶಾಪ್ ನ ಮಹಿಳಾ ಸಿಬ್ಬಂದಿ ಮೂರ್ಛೆ ಹೋದ ಘಟನೆಯೂ ಇದೇ ವೇಳೆ ನಡೆದಿದ್ದು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!