ಬಂದಾರು ಮನೆಯಂಗಳದಲ್ಲಿ ಮಕ್ಳಳು ‘ಬಾಲ್’ ಎಂದು ಕ್ರಿಕೆಟ್‌ ಆಟವಾಡುತ್ತಿದ್ದ ವೇಳೆ ಸ್ಫೋಟ ; ಬಾಲಕನಿಗೆ ಗಾಯ

ಬಂದಾರು ಮನೆಯಂಗಳದಲ್ಲಿ ಮಕ್ಳಳು ‘ಬಾಲ್’ ಎಂದು ಕ್ರಿಕೆಟ್‌ ಆಟವಾಡುತ್ತಿದ್ದ ವೇಳೆ ಸ್ಫೋಟ ; ಬಾಲಕನಿಗೆ ಗಾಯ

Share

ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಬಾಲಕ.
ಅಂಗಳದಲ್ಲಿ ಮಕ್ಖಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದ ಬಾಲಕರಿಬ್ಬರು ಕ್ರಿಕೆಟ್‌ ಆಟವಾಡಿದ್ದಾರೆ. ಏನೂ ಅರಿಯದ ಮುಗ್ಧ ಮಕ್ಕಳು
ಇಬ್ಬ ರು ಬೌಲಿಂಗ್ ಮಾಡಿದ್ದು ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Post Comment

ಟ್ರೆಂಡಿಂಗ್‌

error: Content is protected !!