ಕಣಿಯೂರು ಶ್ರೀಧರ ಅಸಹಜ ಸಾವಿನ‌ ಪ್ರಕರಣ ಉನ್ನತ ತನಿಖೆಗೆ ದಲಿತ ಮುಖಂಡರ ಆಗ್ರಹ

ಕಣಿಯೂರು ಶ್ರೀಧರ ಅಸಹಜ ಸಾವಿನ‌ ಪ್ರಕರಣ ಉನ್ನತ ತನಿಖೆಗೆ ದಲಿತ ಮುಖಂಡರ ಆಗ್ರಹ

Share

ಬೆಳ್ತಂಗಡಿ ಪರಿಶಿಷ್ಟರ ಕುಂದು ಕೊರತೆ ಸಭೆ

ಬೆಳ್ತಂಗಡಿ : ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿಗೆ ಒಪ್ಪಿಸಿರುವುದು ಸ್ವಾಗತಾರ್ಹ, ಕಳಿಯ ಗ್ರಾಮದಲ್ಲಿ 6 ತಿಂಗಳ ಹಿಂದೆ ನಡೆದ ಶ್ರೀಧರ ಮುಗೇರ ಅಸಹಜ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬ ಆಗ್ರಹ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ವ್ಯಕ್ತವಾಯಿತು.

ಬೆಳ್ತಂಗಡಿ ತಾಪಂ ಸಭಾಂಗಣದಲ್ಲಿ ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆಯಲ್ಲಿ
ಹಿರಿಯ ದಲಿತ ಮುಖಂಡ ಸಂಜೀವ ಆರ್ ಮಾತನಾಡಿ 2022ರಲ್ಲಿ ನಡೆದ ಶಿಬಾಜೆಯ ಶ್ರೀಧರ್ ಮುಗೇರ ಕೊಲೆ ಪ್ರಕರಣದಲ್ಲಿ ಕೆಲವು ಬಲಾಢ್ಯರಿದ್ದು ತನಿಖೆ ಹಾದಿ ತಪ್ಪಿದಾಗ ದಲಿತ ಸಂಘಟನೆಗಳ ಪ್ರತಿಭಟನೆಗಳ ಬಳಿಕ ನಡೆದ ಸಿಐಡಿ ತನಿಖೆಯಲ್ಲಿ ಪ್ರಯೋಜನವಾಗಲಿಲ್ಲ. ಇದೀಗ ರಾಜ್ಯ ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿರುವುದು ಸ್ವಾಗತಾರ್ಹ‌ ವಿಚಾರ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.
ಕಳಿಯ ಗ್ರಾಮದಲ್ಲಿ ಶ್ರೀಧರ್ ಮುಗೇರ ಎಂಬವರ ಮೃತದೇಹ ಸಂಶಯಾಸ್ಪದವಾಗಿ ಕೆರೆಯಲ್ಲಿ ಪತ್ತೆಯಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದರೂ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಬಗ್ಗೆ ಧ್ವನಿಗೂಡಿಸಿದ ದಲಿತ ಮುಖಂಡ ಶೇಖರ್ ಲಾಯಿಲ, ಶಿಬಾಜೆ ಪ್ರಕರಣದ ಆರೋಪಿಗಳಿಗೆ ಪೋಲಿಸರು ರಕ್ಷಣೆ ನೀಡಿದ್ದಾರೆ ಎಂದು ಆರೋಪಿಸಿದ ಅವರು ಶಾಸಕರ ಪೋನ್ ಕರೆಗಳ ಬಗ್ಗೆ ಎಸ್ಐಟಿ ಪರಿಶೀಲಿಸಬೇಕು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರ್ ಮಠ್ ಇದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದ್ದು ವೈದ್ಯಕೀಯ ತಾಂತ್ರಿಕ ಪರೀಕ್ಷೆಯ ವರದಿಯ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು ತಿಂಗಳಲ್ಲಿ ತನಿಖೆಯಲ್ಲಿ ಪ್ರಗತಿ ಸಾಧಿಸಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ದರ್ಪಿಂಜೆ ಸೇತುವೆ ಸುತ್ತಮುತ್ತ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು , ಇದೀಗ ಇಲ್ಲಿ ಲಾಯಿಲ ಗ್ರಾಪಂ ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಅವರು ಮುತುವರ್ಜಿಯಿಂದ ಸಿಸಿ ಕ್ಯಾಮರಾ ಅಳವಡಿಸಿದ್ದು ಅದರಲ್ಲಿ ಕೆಲವು ಸಹಾಯದಿಂದ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿರುವವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇನ್ನೋರ್ವ ಮುಖಂಡ ಶೀನ ಪಿಲ್ಯ ಮಾತನಾಡಿ ಪಿಲ್ಯ ಮಾರಿಗುಡಿ ಬಳಿ ವ್ಯಾಪಕ ಅಪಘಾತಗಳು ಸಂಭವಿಸುತ್ತಿದ್ದು , ಇಲ್ಲಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಒತ್ತಾಯಿಸಿದರು. ನಾರಾವಿಯ ಕೃಷ್ಣಪ್ಪರವರು ಮಾತನಾಡಿ ಇತ್ತೀಚಿಗೆ ನಾರಾವಿಯಲ್ಲಿ ದಲಿತ ವ್ಯಕ್ತಿಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಕ್ಕಳ ಎದುರಿನಲ್ಲಿಯೇ ಹಲ್ಲೆ ನಡೆಸಿದ ಘಟನೆ ಬಗ್ಗೆ ಪ್ರಸ್ತಾಪಿಸಿ , ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನಿನಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಚೆನ್ನಕೇಶವ , ವೆಂಕಪ್ಪ ನಾಯ್ಕ ಉಪ್ಪಿನಂಗಡಿ , ರಾಮಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ವ್ಯಾಪ್ತಿಯ ಠಾಣೆಗಳ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಗಳು ಉಪಸ್ಥಿತರಿದ್ದರು.
ಡಿವೈಎಸ್ಪಿ ಕಛೇರಿಯ ಮನೋಹರ್ ಹಿಂದಿನ ಸಭೆಯ ನಡವಳಿಗಳನ್ನು ಸಭೆಯ ಮುಂದಿಟ್ಟರು.

Post Comment

ಟ್ರೆಂಡಿಂಗ್‌

error: Content is protected !!