ಮಾರ್ಚ್ 15; ಕೊಲ್ಲಿ ಸೂರ್ಯ-ಚಂದ್ರ ಜೋಡುಕೆರೆ ಕಂಬಳ

ಮಾರ್ಚ್ 15; ಕೊಲ್ಲಿ ಸೂರ್ಯ-ಚಂದ್ರ ಜೋಡುಕೆರೆ ಕಂಬಳ

Share

ಬೆಳ್ತಂಗಡಿ : ಕಂಬಳ ಪ್ರೇಮಿಗಳ ಬಹು‌ ನಿರೀಕ್ಷೆಯ ಮಾ. 15ರಂದು 28ನೇ ವರ್ಷದ ಬಂಗಾಡಿ- ಕೊಲ್ಲಿ ಹೊನಲು ಬೆಳಕಿನ
ಸೂರ್ಯ-ಚಂದ್ರ ಜೋಡುಕೆರೆ ಕಂಬಳವು ನಾಡಿನ ಸಾವಿರಾರು ಕಂಬಳಾಭಿಮಾನಿಗಳನ್ನು ವಿಶೇಷವಾಗಿ ಆಕರ್ಷಿಸುವ ಮೂಲಕ ಜರಗಲಿದೆ ಎಂದು ಸಮಿತಿ ಅಧ್ಯಕ್ಷ ರಂಜನ್ ಜಿ.ಗೌಡ ಹೇಳಿದರು.
ಅವರು ಉಜಿರೆಯ ಖಾಸಗಿ ಹೋಟೆಲ್ ನಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸೂರ್ಯ-ಚಂದ್ರ ಜೋಡುಕೆರೆ ಕಂಬಳ ಸಮಿತಿ, ರಾಜ್ಯ ಕಂಬಳ ಅಸೋಸಿಯೇಷನ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ ಕೊಲ್ಲಿ ಸೂರ್ಯ-ಚಂದ್ರ ಕಂಬಳದ ಉದ್ಘಾಟನೆಯನ್ನು ಬೆಳಿಗ್ಗೆ 8.30ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸುವರು.
ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್ ಕೆ ಡಿ ಆರ್ ಡಿ ಪಿಯ ಕಾರ್ಯನಿರ್ವಹಣಾ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಅಳದಂಗಡಿ ಶ್ರೀ ಸತ್ಯ ದೇವತೆ- ಕಲ್ಲುರ್ಟಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜೀಲ, ತಹಸೀಲ್ದಾರ್ ಪೃಥ್ವಿ ಸಾನಿಕಂ, ಡಿವೈಎಸ್ಪಿ ರೋಹಿಣಿ ಸಿ.ಕೆ., ಪಶುವೈದ್ಯಾಧಿಕಾರಿ ಡಾ. ರವಿಕುಮಾರ್ ಅವರನ್ನೊಳಗೊಂಡು ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಕೆ. ಗಂಗಾಧರ ಗೌಡ ವಹಿಸಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು‌. ಟಿ.ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ಕುಮಾರ್, ದ.ಕ. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಎಂಎಲ್‌ ಸಿಗಳಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿ ಸೋಜಾ, ಯುವಜನ‌ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಆಯುಕ್ತ ಚೇತನ್ ಆರ್ ಐಎಎಸ್, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ಶ್ರೀ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥ ಕೆ.ಮೋಹನ್ ಕುಮಾರ್ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ ಕುಮಾರ್ ಜೈನ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಒಟ್ಟು 6 ವಿಭಾಗಗಳಲ್ಲಿ ನಡೆಯುವ ಕಂಬಳದಲ್ಲಿ ಏಳೂವರೆ ಪವನ್ ಚಿನ್ನವನ್ನು ಬಹುಮಾನವಾಗಿ ನೀಡಲಾಗುತ್ತದ್ದು ಉಭಯ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಂಬಳದ ಕೋಣ ಜೋಡಿ ಭಾಗವಹಿಸಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ, ಉದ್ಯಮಿ ಪುಷ್ಪರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ವಳಂಬ್ರ, ಪ್ರಶಾಂತ್ ಪೂಜಾರಿ ಕೊಕ್ಕರ್ಣೆ, ಜತೆ ಕಾರ್ಯದರ್ಶಿ ಭರತ್ ಬಂಗಾಡಿ, ಮಧುಕರ ಸುವರ್ಣ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Post Comment

ಟ್ರೆಂಡಿಂಗ್‌

error: Content is protected !!