ಬೆಳ್ಳಾರೆ ಕಳವು ಪ್ರಕರಣ: ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನೆರಿಯಾದ ಆರೋಪಿ ಬಂಧನ

ಬೆಳ್ತಂಗಡಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಮಾ:24.2022ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ ವಿಧಿಸಿದ್ದಾರೆ.
ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ ವಿಧಿಸಿದ್ದು ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ವಿಧಿಸಿ ನೀಡಿ ಆದೇಶಿಸಿರುತ್ತಾರೆ. ಮುಂದುವರಿದಂತೆ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯದಲ್ಲಿ
ಮಾನ್ಯ ನ್ಯಾಯಾಧೀಶರು ರೂ. 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡಿಸಿದ್ದಾರೆ.













Post Comment