ಮಂಗಳೂರಿನ ವಿದ್ಯಾರ್ಥಿನಿಯರನ್ನು ಫಾಲ್ಸ್ ಗೆ ಕರೆತಂದು ಲೈಂಗಿಕ ಕಿರುಕುಳ : ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು

⛔ಸಾಂದರ್ಭಿಕ ಚಿತ್ರ
ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಜಲಪಾತದಲ್ಲಿ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿದ ಘಪನೆ ಬುಧವಾರ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 20.2026ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ಬಂದಿದ್ದ ವೇಳೆ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಯುವಕರು ಎಸಗಿದ ಕೃತ್ಯಕ್ಕೆ ಸಂತ್ರಸ್ತ ಯುವತಿಯರು ಪ್ರತಿರೋಧ ವ್ಯಕ್ತಪಡಿಸಿದ್ದು ಸ್ಥಳದಲ್ಲಿದ್ದವರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ.
ಮಾಹಿತಿ ತಿಳಿದು ಮಧ್ಯೆ ಪ್ರವೇಶಿಸಿದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ ಪ್ರಕರಣ ದಾಖಲಿಸಿಕೊಂಡು
ಮುಂದಿನ ಕಾನೂನುಕ್ರಮ ಕೈಗೊಂಡಿದ್ದಾರೆ.















Post Comment